News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಳೆ ಉಪ ರಾಷ್ಟ್ರಪತಿ ಚುನಾವಣೆ: ಜಗದೀಪ್ ಧನ್ಕರ್, ಮಾರ್ಗರೇಟ್‌ ಆಳ್ವ‌ ಕಣದಲ್ಲಿ

ನವದೆಹಲಿ: ನೂತನ ಉಪ ರಾಷ್ಟ್ರಪತಿ ಆಯ್ಕೆಗೆ ನಾಳೆ ಮತದಾನ ನಡೆಯಲಿದೆ. ಬೆಳಿಗ್ಗೆ  10 ಗಂಟೆಗೆ ಸಂಸತ್ ಭವನದಲ್ಲಿ ಮತದಾನ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ಎನ್‌ಡಿಎ ಅಭ್ಯರ್ಥಿಯಾಗಿದ್ದರೆ, ಮಾರ್ಗರೆಟ್ ಆಳ್ವ ವಿರೋಧ ಪಕ್ಷದ ಅಭ್ಯರ್ಥಿಯಾಗಿದ್ದಾರೆ.

ಏಕ ವರ್ಗಾವಣೆ ಮತದ ಮೂಲಕ ಅನುಪಾತದ ಪ್ರಾತಿನಿಧ್ಯದ ವ್ಯವಸ್ಥೆಗೆ ಅನುಗುಣವಾಗಿ ಸಂಸತ್ತಿನ ಎರಡೂ ಸದನಗಳ ಸದಸ್ಯರನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಸದಸ್ಯರು ಉಪ ರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ.

ಒಟ್ಟು ಮತದಾರರ ಸಂಖ್ಯೆ 788. ಇದು ಲೋಕಸಭೆಯ 543 ಚುನಾಯಿತ ಸದಸ್ಯರು ಮತ್ತು ರಾಜ್ಯಸಭೆಯ 233 ಚುನಾಯಿತ ಸದಸ್ಯರು ಹಾಗೂ ರಾಜ್ಯಸಭೆಯ 12 ನಾಮನಿರ್ದೇಶಿತ ಸದಸ್ಯರನ್ನು ಒಳಗೊಂಡಿದೆ.

ನಾಳೆ ಮತದಾನದ ನಂತರ ಸಂಸತ್ ಭವನದಲ್ಲಿ ಮತ ಎಣಿಕೆ ನಡೆಯಲಿದೆ. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅವಧಿ ಇದೇ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top