News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶದಲ್ಲಿ ಪ್ರಸ್ತುತ 13,92,265 ಎಲೆಕ್ಟ್ರಿಕ್ ವಾಹನಗಳು ರಸ್ತೆಗಳಲ್ಲಿ ಓಡುತ್ತಿವೆ: ಕೇಂದ್ರ

ನವದೆಹಲಿ: ಪ್ರಸ್ತುತ ದೇಶದ ರಸ್ತೆಗಳಲ್ಲಿ 13,92,265 ಎಲೆಕ್ಟ್ರಿಕ್ ವಾಹನಗಳು ಓಡುತ್ತಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇವುಗಳಲ್ಲಿ 5 ಲಕ್ಷದ 44 ಸಾವಿರಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು, 7 ಲಕ್ಷದ 93 ಸಾವಿರಕ್ಕೂ ಹೆಚ್ಚು ತ್ರಿಚಕ್ರ ವಾಹನಗಳು ಮತ್ತು 54 ಸಾವಿರಕ್ಕೂ ಹೆಚ್ಚು ನಾಲ್ಕು ಚಕ್ರಗಳ ವಾಹನಗಳು ಸೇರಿವೆ.

ಇಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಭಾರೀ ಕೈಗಾರಿಕೆಗಳ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜರ್ ಈ ವಿಷಯ ತಿಳಿಸಿದ್ದಾರೆ.

ವಾಹನ್-4 ನೋಂದಣಿ ಪ್ರಮಾಣಪತ್ರದ ಕೇಂದ್ರೀಕೃತ ಡೇಟಾಬೇಸ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ,  2020-21 ರ ಹಣಕಾಸು ವರ್ಷಕ್ಕೆ ಹೋಲಿಸಿದರೆ 2021-22 ರ ಆರ್ಥಿಕ ವರ್ಷದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಮೂರು ಪಟ್ಟು ಹೆಚ್ಚಾಗಿದ್ದು, 1, 34,460 ರಿಂದ 4, 28, 224ಕ್ಕೆ ತಲುಪಿದೆ.

ಎಲೆಕ್ಟ್ರಿಕ್ ವಾಹನಗಳ ಮಾರಾಟದ ಹೆಚ್ಚಳಕ್ಕೆ ಮುಖ್ಯವಾಗಿ FAME ಇಂಡಿಯಾ ಸ್ಕೀಮ್ ಹಂತ-II ಅಡಿಯಲ್ಲಿ ಒದಗಿಸಲಾದ ಪ್ರೋತ್ಸಾಹಕ್ಕೆ ಕಾರಣವಾಗಿದೆ ಎಂದು ಸಚಿವರು ಒತ್ತಿ ಹೇಳಿದರು. ಇದು ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ FAME ಮಾನದಂಡಗಳನ್ನು ಪೂರೈಸುವ ಮೂಲಕ ಎಲೆಕ್ಟ್ರಿಕ್‌ ವಾಹನ ಖರೀದಿ ಬೆಲೆಯಲ್ಲಿ ಮುಂಗಡ ಕಡಿತ ಒದಗಿಸುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top