News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರೌಡಿಸಂ ಮಾಡಿ ಕಾಂಗ್ರೆಸ್‌ನಿಂದ ವಿಕಾಸಸೌಧಕ್ಕೆ ನುಗ್ಗುವ ಪ್ರಯತ್ನ: ಸಿಎಂ

ಬೆಂಗಳೂರು: ಬಿಬಿಎಂಪಿ ಮೀಸಲಾತಿ ಪಟ್ಟಿಯ ಬಗ್ಗೆ ವಿರೋಧವನ್ನು ಕಾಂಗ್ರೆಸ್ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಇದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದು ಎಷ್ಟು ಸರಿ. ಕಾಂಗ್ರೆಸ್ ಸಂಸ್ಕೃತಿಯನ್ನು ಇದು ತೋರಿಸುತ್ತದೆ. ಇದನ್ನು ಎಲ್ಲರೂ ಖಂಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ಇವರ ವತಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಆಯೋಜಿಸಿರುವ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್‌ನ ಸೆಂಟರ್ ಆಫ್ ಎಕ್ಸಲೆನ್ಸ್ ಬಿಲ್ಡಿಂಗ್‌ನ ಭೂಮಿ ಪೂಜಾ ಕಾರ್ಯವನ್ನು ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಬಿಎಂಪಿ ಮೀಸಲಾತಿ ಪಟ್ಟಿಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಇಂದು ವಿಕಾಸಸೌಧದಲ್ಲಿ ಪ್ರತಿಭಟನೆ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿ ಮೀಸಲಾತಿಯನ್ನು 2015 ರ ಉಚ್ಛ ನ್ಯಾಯಾಲಯದ ತೀರ್ಪಿನ ಅನ್ವಯ ನಿಯಮಗಳನ್ನು ಅನುಸರಿಸಿ ಮಾಡಲಾಗಿದೆ. ಕಾಂಗ್ರೆಸ್ ಸಹ ಹಿಂದೆ ಇದನ್ನು ಮಾಡಿದ್ದಾಗ ಏನಾಗಿತ್ತು ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲಾ ಶಾಸಕರ ಕ್ಷೇತ್ರದಲ್ಲಿ ಏನಾಗಿತ್ತು ಎನ್ನುವುದು ಗೊತ್ತೇ ಇದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top