News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆ. 14 ಅನ್ನು ವಿಭಜನೆಯ ಭಯಾನಕ ನೆನಪಿನ ದಿನವಾಗಿ ಆಚರಿಸಲು ಯುಜಿಸಿ ಕರೆ

ನವದೆಹಲಿ: ಯೂನಿವರ್ಸಿಟಿ ಗ್ರ್ಯಾಂಟ್‌ ಕಮಿಷನ್ (UGC) ಎಲ್ಲಾ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಆಗಸ್ಟ್ 14 ಅನ್ನು ವಿಭಜನೆಯ ಭಯಾನಕ ನೆನಪಿನ ದಿನವಾಗಿ ಆಚರಿಸುವಂತೆ ಕರೆ ನೀಡಿದೆ. ‌

1947 ರ ವಿಭಜನೆಯ ಸಮಯದಲ್ಲಿ ಲಕ್ಷಾಂತರ ಭಾರತೀಯರ ನೋವುಗಳು ಮತ್ತು ತ್ಯಾಗಗಳನ್ನು ಸ್ಮರಿಸಲು ಕಾರ್ಯಕ್ರಮಗಳು ಮತ್ತು ವಿಚಾರ ಸಂಕಿರಣಗಳನ್ನು ಆಯೋಜಿಸಲು ಸೂಚನೆ ನೀಡಿದೆ.

ಯುಜಿಸಿ ಅಧ್ಯಕ್ಷ ಪ್ರೊ.ಎಂ.ಜಗದೇಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಅಧ್ಯಾಪಕರನ್ನು ಆಚರಣೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದು ಮುಖ್ಯವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ‘ವಿಭಜನೆಯ ಭಯಾನಕ ನೆನಪಿನ ದಿನ’ದ ಅಂಗವಾಗಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

ದೇಶ ವಿಭಜನೆಯ ನೋವನ್ನು ಎಂದಿಗೂ ಮರೆಯಲಾಗದು ಎಂದಿದ್ದ ಪ್ರಧಾನಿ ಮೋದಿ ಅವರು, ಕಳೆದ ವರ್ಷ ಆಗಸ್ಟ್ 14 ಅನ್ನು ಜನರ ಹೋರಾಟ ಮತ್ತು ತ್ಯಾಗದ ನೆನಪಿಗಾಗಿ ವಿಭಜನೆಯ ಭೀಕರ ನೆನಪಿನ ದಿನವಾಗಿ ಆಚರಿಸಲಾಗುವುದು ಎಂದು ಘೋಷಿಸಿದ್ದರು.

ನಮ್ಮ ಲಕ್ಷಾಂತರ ಸಹೋದರಿಯರು ಮತ್ತು ಸಹೋದರರು ಸ್ಥಳಾಂತರಗೊಂಡಿದ್ದಾರೆ. ದ್ವೇಷ ಮತ್ತು ಹಿಂಸಾಚಾರದಿಂದ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೋದಿ ಹೇಳಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top