News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯದ ಶ್ರಮಿಕರಿಗಾಗಿ ʼಡಿಜಿಟಲ್‌ ಆರೋಗ್ಯ ಯೋಜನೆʼ ಶೀಘ್ರ ಜಾರಿ

ಬೆಂಗಳೂರು: ಶ್ರಮಿಕ ವರ್ಗಕ್ಕೆ ವೈದ್ಯಕೀಯ ಸೇವೆಗಳನ್ನು ಸುಲಭಗೊಳಿಸುವ ಗುರಿಯೊಂದಿಗೆ ‘ಡಿಜಿಟಲ್ ಆರೋಗ್ಯ ಯೋಜನೆ’ಯನ್ನು ಜಾರಿಗೊಳಿಸಲು ಕಾರ್ಮಿಕ ಇಲಾಖೆ ಮುಂದಾಗಿದೆ.

ಈ ನಿಟ್ಟಿನಲ್ಲಿ ಡಿಜಿಟಲ್ ಟೆಲಿ ಹೆಲ್ತ್ ಮತ್ತು ಟೆಲಿ ಮೆಡಿಸಿನ್ಸ್ ಸೇವೆಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವ ಸಂಬಂಧ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಸಮ್ಮುಖದಲ್ಲಿ ಕಾರ್ಮಿಕ ಇಲಾಖೆ ಮತ್ತು ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿವೆ.

ಶ್ರಮಿಕ ವರ್ಗದ ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ವೈದ್ಯಕೀಯ ಸೇವೆಗಳನ್ನು ಅವರಿಗೆ ಇನ್ನಷ್ಟು ಹತ್ತಿರವಾಗಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಈ ಯೋಜನೆಯನ್ನು ಪ್ರಾಯೋಗಿಕವಾಗಿ ಬೆಂಗಳೂರಿನ ಇಂದಿರಾನಗರ ಕಾರ್ಮಿಕರ ರಾಜ್ಯ ವಿಮಾ ಆಸ್ಪತ್ರೆ ವ್ಯಾಪ್ತಿಯ ಎಂಟು ಚಿಕಿತ್ಸಾಲಯಗಳು ಮತ್ತು ಹುಬ್ಬಳ್ಳಿ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ ವ್ಯಾಪ್ತಿಯ ಮೂರು ಚಿಕಿತ್ಸಾಲಯಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಸಚಿವ ಹೆಬ್ಬಾರ್ ತಿಳಿಸಿದ್ದಾರೆ.

2020ರ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಹೆಲ್ತ್ ಯೋಜನೆ ಅನುಷ್ಠಾನದ ಬಗ್ಗೆ ಮಾತನಾಡಿದ್ದರು, ಅವರ ಆಶಯದಂತೆ ರಾಜ್ಯದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲು ಕಾರ್ಮಿಕ ಇಲಾಖೆ ಮುಂದಾಗಿದೆ. ಕಾರ್ಮಿಕ ವರ್ಗದ ಆರೋಗ್ಯ ಕಾಳಜಿ ನಮ್ಮ ಸರಕಾರದ ಆದ್ಯತೆಯಾಗಿದೆ ಹೀಗಾಗಿ ಡಿಜಿಟಲ್ ಹೆಲ್ತ್ ಯೋಜನೆ ಜಾರಿಗೆ ಮುಂದಾಗಿದ್ದೇವೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top