News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಮನ್‌ವೆಲ್ತ್ ಗೇಮ್ಸ್:‌ ಇದುವರೆಗೆ 40 ಪದಕ ಗೆದ್ದ ಭಾರತ

ನವದೆಹಲಿ: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ, ಭಾರತ ನಿನ್ನೆ ನಾಲ್ಕು ಚಿನ್ನ ಮತ್ತು ಮೂರು ಬೆಳ್ಳಿ ಪದಕಗಳನ್ನು ಜಯಿಸಿದ್ದು, ಒಟ್ಟಾರೆ ಪದಕಗಳ ಸಂಖ್ಯೆಯನ್ನು 40 ಕ್ಕೆ ಏರಿಸಿದೆ. ರವಿಕುಮಾರ್ ದಹಿಯಾ, ವಿನೇಶ್ ಫೋಗಟ್ ಮತ್ತು ನವೀನ್ ಅವರು ಕುಸ್ತಿಯಲ್ಲಿ ಮತ್ತೊಂದು ಹ್ಯಾಟ್ರಿಕ್ ಚಿನ್ನದ ಪದಕಗಳೊಂದಿಗೆ  ಪ್ರಾಬಲ್ಯ ಸಾಧಿಸಿದರು.

ಭಾರತದ ಸ್ಟಾರ್ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಕೂಡ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದರು. ಭಾರತದ ಮತ್ತೋರ್ವ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಸೋನಾಲ್ಬೆನ್ ಮನುಭಾಯ್ ಪಟೇಲ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕ ಪಡೆದರು.

ಇದಕ್ಕೂ ಮೊದಲು, ಭಾರತೀಯ ಪುರುಷರ ಹಾಕಿ ತಂಡವು ದಕ್ಷಿಣ ಆಫ್ರಿಕಾವನ್ನು 3-2 ಗೋಲುಗಳಿಂದ ಸೋಲಿಸಿ ಫೈನಲ್ ತಲುಪಿತು ಮತ್ತು ದೇಶಕ್ಕೆ ಮತ್ತೊಂದು ಪದಕವನ್ನು ಖಚಿತಪಡಿಸಿತು. ಚಿನ್ನದ ಪದಕಕ್ಕಾಗಿ ನಡೆಯಲಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ಅಥವಾ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.  ನಿನ್ನೆಯಷ್ಟೇ ಭಾರತ ತನ್ನ ಖಾತೆಗೆ ಮೂರು ಬೆಳ್ಳಿ ಪದಕಗಳನ್ನು ಸೇರಿಸಿತ್ತು.

ಇಂದು ನಾಲ್ವರು ಬಾಕ್ಸರ್‌ಗಳು ಚಿನ್ನಕ್ಕಾಗಿ ಸೆಣಸಲಿರುವ ಹಿನ್ನೆಲೆಯಲ್ಲಿ ಭಾರತ ಬಾಕ್ಸಿಂಗ್‌ನಲ್ಲಿ ನಾಲ್ಕು ಪದಕಗಳನ್ನು ಖಚಿತಪಡಿಸಿದೆ. ಅಮಿತ್ ಪಂಘಲ್, ನಿತು ಘಂಘಾಸ್, ನಿಖತ್ ಜರೀನ್ ಮತ್ತು ಸಾಗರ್ ಅಹ್ಲಾವತ್ ತಮ್ಮ ತಮ್ಮ ಈವೆಂಟ್‌ಗಳ ಫೈನಲ್‌ಗೆ ತಲುಪಿದ್ದಾರೆ. ಭಾರತ ಇದುವರೆಗೆ 40 ಪದಕಗಳನ್ನು ಗೆದ್ದಿದ್ದು, ಇದರಲ್ಲಿ 13 ಚಿನ್ನ, 11 ಬೆಳ್ಳಿ ಮತ್ತು 16 ಕಂಚಿನ ಪದಕಗಳು ಸೇರಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top