News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಯುಪಿ: ಮಹಿಳೆಯನ್ನು ನಿಂದಿಸಿದ್ದ ರಾಜಕಾರಣಿಯ ಅಕ್ರಮ ಕಟ್ಟಡ ಧ್ವಂಸ

ಲಕ್ನೋ: ಉತ್ತರ ಪ್ರದೇಶದ ನೋಯ್ಡಾ ಸೊಸೈಟಿಯಲ್ಲಿ ಮಹಿಳೆಯನ್ನು ನಿಂದಿಸಿದ ರಾಜಕಾರಣಿಯ ಅಕ್ರಮ ಮನೆ ಮತ್ತು ಕಟ್ಟಡವನ್ನು ಬುಲ್ಡೋಜರ್ ಮೂಲಕ ಕೆಡವಲಾಗಿದೆ.

ಕೆಲವು ದಿನಗಳ ಹಿಂದೆ ನೋಯ್ಡಾದ ಸೆಕ್ಟರ್ -93 ಬಿ ನಲ್ಲಿರುವ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಶ್ರೀಕಾಂತ್ ತ್ಯಾಗಿ ಮತ್ತು ಮಹಿಳೆಯ ನಡುವೆ ಜಟಾಪಟಿ ನಡೆದಿತ್ತು. ಮಹಿಳೆಯನ್ನು ನಿಂದಿಸಿದ ಮತ್ತು ಹಲ್ಲೆ ಮಾಡಿದ ಆರೋಪ ದಾಖಲಾದ ಬಳಿಕ ಇಂದು ನೋಯ್ಡಾ ಹೌಸಿಂಗ್ ಸೊಸೈಟಿಗೆ ಬುಲ್ಡೋಜರ್‌ಗಳು ಬಂದು ತ್ಯಾಗಿ ಮನೆ ಮತ್ತು ಅಕ್ರಮ ಕಟ್ಟಡಗಳನ್ನು ಉರುಳಿಸಿದೆ.

ಶ್ರೀಕಾಂತ್ ತ್ಯಾಗಿ ತಾನು ಬಿಜೆಪಿಯ ಕಿಸಾನ್ ಮೋರ್ಚಾದಿಂದ ಬಂದವನು ಎಂದು ಹೇಳುತ್ತಿದ್ದಾನೆ. ಆದರೆ ಇದನ್ನು ಬಿಜೆಪಿ ನಿರಾಕರಿಸಿದೆ.

ಅಧಿಕಾರಿಗಳು ಪೊಲೀಸ್ ಸಿಬ್ಬಂದಿಯೊಂದಿಗೆ ನೋಯ್ಡಾದ ಸೆಕ್ಟರ್-93 ಬಿ ನಲ್ಲಿರುವ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯನ್ನು ತಲುಪಿದರು ಮತ್ತು ಶ್ರೀಕಾಂತ್ ತ್ಯಾಗಿ ಅವರ ಅಕ್ರಮ ಕಟ್ಟಡವನ್ನು ಕೆಡವಿದರು ಎಂದು ಮೂಲಗಳು ತಿಳಿಸಿವೆ

ಗದ್ದಲೆಬ್ಬಿಸಿದ ತ್ಯಾಗಿ ಬೆಂಬಲಿಗರ ವಿರುದ್ಧ ಪೊಲೀಸರು ಕ್ರಮಕೈಗೊಂಡಿದ್ದಾರೆ. ನೋಯ್ಡಾ ಪೊಲೀಸರು  ತ್ಯಾಗಿ ವಿರುದ್ಧ ಗೂಂಡಾ ಕಾಯ್ದೆಯನ್ನು ಹಾಕಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top