ನವದೆಹಲಿ: ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಆಟಗಾರರ ಪದಕ ಬೇಟೆ ಮುಂದುವರೆಸಿದ್ದು, ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಕೆನಡಾ ಆಟಗಾರ್ತಿ ಮಿಚೆಲ್ ಲೀ ವಿರುದ್ಧ 21-15, 21-13 ಅಂತರದ ಸೆಟ್ ಗಳಿಂದ ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟರು.
2014ರಲ್ಲಿ ಕಂಚಿನ ಪದಕ ಗೆದ್ದಿದ್ದ ಪಿವಿ ಸಿಂಧು 2018ರಲ್ಲಿ ಬೆಳ್ಳಿಪದಕ ಗೆದ್ದಿದ್ದರು. ಇದೀಗ 2022ರಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಹೆಮ್ಮೆ ತಂದಿದ್ದಾರೆ.
ಇದೀಗ ಭಾರತದ ಖಾತೆಯಲ್ಲಿ 19 ಪದಕಗಳು ಇದ್ದು, ನೆದರ್ಲ್ಯಾಂಡ್ ಅನ್ನು ಹಿಂದಿಕ್ಕಿ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
GLORY FOR SINDHU🔥@Pvsindhu1 wins against Michelle Li (CAN) with a score of 2-0 at the #CommonwealthGames2022
With this win the former World Champion Sindhu adds another Gold🥇 to her long list of monumental achievements🤩
Many Congratulations Champ👍🏻🤩#Cheer4India pic.twitter.com/s7ZyiDxV2w
— SAI Media (@Media_SAI) August 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.