News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 29th September 2022


×
Home About Us Advertise With s Contact Us

ಬಲವಂತದ ಮತಾಂತರ: ಮಹಾರಾಷ್ಟ್ರದಲ್ಲಿ 4 ಕ್ರೈಸ್ಥ ಮಿಷನರಿಗಳ ಬಂಧನ

ಪಾಲ್ಘರ್: ಆಮಿಷ ತೋರಿಸಿ ಆದಿವಾಸಿಗಳ ಮತಾಂತರಕ್ಕೆ ಯತ್ನಿಸಿದ ನಾಲ್ವರು ಕ್ರಿಶ್ಚಿಯನ್‌ ಮಿಷನರಿಗಳನ್ನು ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಬಂಧಿಸಲಾಗಿದೆ.

ಬಲವಂತದ ಮತಾಂತರ ಕಾನೂನಿನ ವಿರುದ್ಧವಾಗಿದ್ದರೂ, ಮಹಾರಾಷ್ಟ್ರದಲ್ಲಿ ಆದಿವಾಸಿಗರನ್ನು ಮತಾಂತರ ಮಾಡಿದ ಆರೋಪದ ಮೇರೆಗೆ ನಾಲ್ವರು ಕ್ರಿಶ್ಚಿಯನ್​ ಧರ್ಮ ಗುರುಗಳನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಲ್ಘರ್​ ಜಿಲ್ಲೆಯಲ್ಲಿ ಆದಿವಾಸಿ ಮಹಿಳೆಯನ್ನು ಕ್ರಿಶ್ಚಿಯನ್​ ಧರ್ಮಕ್ಕೆ ಮತಾಂತರ ಹೊಂದುವಂತೆ ಬಲವಂತ ಮಾಡಲಾಗುತ್ತಿತ್ತು. ಆಕೆಗೆ ಹಣದ ಆಮಿಷ ತೋರಿಸಲಾಗಿತ್ತು. ಈ ಬಗ್ಗೆ ತಿಳಿದ ಹಿಂದೂಪರರು ಸ್ಥಳಕ್ಕಾಗಮಿಸಿ ವಿಚಾರಿಸಿದ್ದಾರೆ. ಈ ವೇಳೆ, ಮಹಿಳೆ ತನಗೆ ಹಣದ ಆಮಿಷ ಒಡ್ಡಿದ್ದಲ್ಲದೇ, ಮತಾಂತರ ಹೊಂದಲು ಬಲವಂತ ಮಾಡಲಾಯಿತು ಎಂದು ಮಹಿಳೆ ದೂರಿದ್ದಾರೆ. ನಂತರ ಪೊಲೀಸರಿಗೆ ದೂರು ನೀಡಲಾಗಿದೆ.

ಬಳಿಕ ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದು, ನಾಲ್ವರು ಕ್ರಿಶ್ಚಿಯನ್​ ಮಿಷನರಿಗಳನ್ನು ಬಂಧಿಸಲಾಗಿದೆ.

ಪಾಲ್ಘರ್ ಜಿಲ್ಲೆಯಲ್ಲಿ ಆದಿವಾಸಿಗಳು ಹೆಚ್ಚು ಪ್ರಮಾಣದಲ್ಲಿದ್ದಾರೆ. ಇವರನ್ನು ಮತಾಂತರ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top