News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಯೋತ್ಪಾದನೆಗೆ ಹಣಕಾಸು: ಜಮ್ಮು-ಕಾಶ್ಮೀರದ ಹಲವೆಡೆ NIA ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಹಣಕಾಸು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು  ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)  ಜಮ್ಮು ಮತ್ತು ದೋಡಾ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ. ನಿಷೇಧಿತ ಜಮಾತ್-ಎ-ಇಸ್ಲಾಮಿ (ಜೆಐ) ಸದಸ್ಯರಿಗೆ ಸಂಬಂಧಿಸಿದ ಸ್ಥಳಗಳು ಇವಾಗಿವೆ.

ಇಂದು ಮುಂಜಾನೆಯಿಂದ ಎರಡು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಜೆಐನ ಪದಾಧಿಕಾರಿಗಳು ಮತ್ತು ಸದಸ್ಯರ ಸುಮಾರು ಹನ್ನೆರಡು ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿಗಳು ನಡೆದಿದೆ ಎಂದು ಮೂಲಗಳು ತಿಳಿಸಿವೆ.

ದೋಡಾ ಜಿಲ್ಲೆಯ ಧಾರಾ-ಗುಂಡಾನಾ, ಮುನ್ಶಿ ಮೊಹಲ್ಲಾ, ಅಕ್ರಂಬಂದ್, ನಗ್ರಿ ನಾಯ್ ಬಸ್ತಿ, ಖರೋಟಿ ಭಗವಾ, ತಲೇಲಾ ಮತ್ತು ಮಾಲೋತಿ ಭಲ್ಲಾ ಮತ್ತು ಜಮ್ಮುವಿನ ಭಟಿಂಡಿಯಲ್ಲಿ ದಾಳಿ ನಡೆಸಲಾಗಿದೆ.

ಕಳೆದ ವರ್ಷ ಫೆಬ್ರವರಿ 5 ರಂದು ಎನ್‌ಐಎ ಸ್ವಯಂಪ್ರೇರಿತವಾಗಿ ಜೆಐ ಸದಸ್ಯರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ದೇಶೀಯವಾಗಿ ಮತ್ತು ವಿದೇಶದಲ್ಲಿ ದೇಣಿಗೆಗಳ ಮೂಲಕ ಹಣವನ್ನು ಸಂಗ್ರಹಿಸುತ್ತಿರುವ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ. ಈ ಸಂಘಟನೆ ದತ್ತಿ ಮತ್ತು ಇತರ ಕಲ್ಯಾಣ ಚಟುವಟಿಕೆಗಳ ಹೆಸರಿನಲ್ಲಿ ಹಣ ಸಂಗ್ರಹಿಸಿ ಅದನ್ನು  ಹಿಂಸಾತ್ಮಕ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಬಳಸುತ್ತಿದೆ ಎನ್ನಲಾಗಿದೆ.

ಎನ್‌ಐಎ ಪ್ರಕಾರ, ಜೆಐ ಸಂಗ್ರಹಿಸುತ್ತಿರುವ ಹಣವನ್ನು ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಹಿಜ್ಬ್-ಉಲ್-ಮುಜಾಹಿದ್ದೀನ್, ಲಷ್ಕರ್-ಎ-ತೈಬಾ ಮತ್ತು ಇತರ ಜೆಐ ಕೇಡರ್‌ಗಳ ಸುಸಂಘಟಿತ ಜಾಲಗಳ ಮೂಲಕ ಪ್ರಸಾರ ಮಾಡಲಾಗುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top