News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 29th September 2022


×
Home About Us Advertise With s Contact Us

ಜಿಹಾದ್‌ನಲ್ಲಿ ತೊಡಗಿದ್ದ ಇಬ್ಬರು ಬಾಂಗ್ಲಾದೇಶಿಗಳನ್ನು ಬಂಧಿಸಿದ ಎನ್‌ಐಎ

ನವದೆಹಲಿ: ಆನ್‌ಲೈನ್‌ನಲ್ಲಿ ದ್ವೇಷದ ಮತ್ತು ಮೂಲಭೂತವಾದಿ ವಿಷಯಗಳನ್ನು ಪೋಸ್ಟ್ ಮಾಡುವ ಮೂಲಕ ಭಾರತದಲ್ಲಿ ಜಿಹಾದ್ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಕಟ್ಟರ್‌ ಮೂಲಭೂತವಾದಿ ಬಾಂಗ್ಲಾದೇಶಿ ಪ್ರಜೆಗಳನ್ನು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ವಕ್ತಾರರು ತಿಳಿಸಿದ್ದಾರೆ.

ಬಾಂಗ್ಲಾದೇಶದ ನಾರಾಯಣಗಂಜ್ ಜಿಲ್ಲೆಯ ಹಮೀದುಲ್ಲಾ ಅಲಿಯಾಸ್ ರಾಜು ಗಾಜಿ  ಮತ್ತು ಮದರಿಪುರ ಜಿಲ್ಲೆಯ ಮೊಹಮ್ಮದ್ ಸಹದತ್ ಹುಸೇನ್ ಅಲಿಯಾಸ್ ಅಬಿದುಲ್ಲಾ ಅವರನ್ನು ಭಾನುವಾರ ಬಂಧಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಭೋಪಾಲ್‌ನ ಐಶ್‌ಬಾಗ್‌ನಿಂದ ಮೂವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಸೇರಿದಂತೆ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶದ (ಜೆಎಂಬಿ) ಆರು ಸಕ್ರಿಯ ಕಾರ್ಯಕರ್ತರ ಬಂಧನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಈ ಇಬ್ಬರನ್ನು ಬಂಧಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಹಮೀದುಲ್ಲಾ ಮತ್ತು ಹುಸೇನ್ ಆರು ಬಂಧಿತ ಜೆಎಂಬಿ ಸದಸ್ಯರ ನಿಕಟ ಸಹಚರರಾಗಿದ್ದರು ಮತ್ತು ಭಾರತ ಮತ್ತು ಬಾಂಗ್ಲಾದೇಶದಲ್ಲಿರುವ ತಮ್ಮ ಸಹಚರರೊಂದಿಗೆ ಸಂವಹನ ನಡೆಸಲು ಎನ್‌ಕ್ರಿಪ್ಟ್ ಮಾಡಿದ ಅಪ್ಲಿಕೇಶನ್‌ಗಳನ್ನು ಇವರು ಬಳಸುತ್ತಿರುವುದು ಕಂಡುಬಂದಿದೆ ಎಂದು ಎನ್‌ಐಎ ಹೇಳಿದೆ.

“ಬಂಧಿತ ಆರೋಪಿಗಳು ಕಟ್ಟರ್ ಮೂಲಭೂತವಾದಿಗಳು ಮತ್ತು ಇತರ ಜನರನ್ನು ಉಗ್ರ ಚಿಂತಕರನ್ನಾಗಿ ಮಾಟಲು ವಿವಿಧ ಸೋಶಿಯಲ್‌ ಮೀಡಿಯಾ ವೇದಿಕೆಗಳಲ್ಲಿ ಆನ್‌ಲೈನ್‌ನಲ್ಲಿ ದ್ವೇಷ ತುಂಬಿದ ಮತ್ತು ಉಗ್ರ ವಿಷಯಗಳನ್ನು ಪೋಸ್ಟ್ ಮಾಡುವ ಮೂಲಕ ಜಿಹಾದ್ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಎನ್‌ಐಎ ವಕ್ತಾರರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಜೆಎಂಬಿ ಸಿದ್ಧಾಂತವನ್ನು ಪ್ರಚಾರ ಮಾಡುವಲ್ಲಿ ಮತ್ತು ಭಾರತದ ವಿರುದ್ಧ ‘ಜಿಹಾದ್’ ನಡೆಸಲು ಯುವಕರನ್ನು ಪ್ರೇರೇಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಎನ್ಐಎ ಹೇಳಿದೆ.

ಈ ಪ್ರಕರಣವನ್ನು ಆರಂಭದಲ್ಲಿ ಮಾರ್ಚ್ 14 ರಂದು ಪೋಲೀಸ್ ಸ್ಟೇಷನ್ ಎಸ್‌ಟಿಎಫ್ ಭೋಪಾಲ್‌ನಲ್ಲಿ ದಾಖಲಿಸಲಾಗಿತ್ತು ಮತ್ತು ಏಪ್ರಿಲ್ 5 ರಂದು ಎನ್‌ಐಎ ಮತ್ತೆ ನೋಂದಾಯಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top