News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶದ 24 ಸ್ಮಾರಕ ಮತ್ತು ತಾಣಗಳು ಇದುವರೆಗೆ ಪತ್ತೆಯಾಗಿಲ್ಲ: ಕೇಂದ್ರ

ನವದೆಹಲಿ: ದೇಶದಲ್ಲಿ 24 ಸ್ಮಾರಕಗಳನ್ನು ಮತ್ತು ಸ್ಥಳಗಳನ್ನು ಪತ್ತೆ ಹಚ್ಚಲಾಗಿಲ್ಲ ಎಂದು ಸಂಸತ್ತಿಗೆ ಸೋಮವಾರ ಮಾಹಿತಿ ನೀಡಲಾಗಿದೆ.

ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಪ್ರತಿಕ್ರಿಯೆ ನೀಡಿ, “24 ಸ್ಮಾರಕಗಳು/ಸ್ಥಳಗಳು ಪತ್ತೆಯಾಗಿಲ್ಲ” ಎಂದು ಹೇಳಿದರು.

ಭಾರತೀಯ ಪುರಾತತ್ವ ಇಲಾಖೆಯು ಕಳೆದ ಎಂಟು ವರ್ಷಗಳಲ್ಲಿ 8,478 ಗ್ರಾಮಗಳನ್ನು ಸಮೀಕ್ಷೆ ಮಾಡಿದೆ ಮತ್ತು ಅವುಗಳಲ್ಲಿ 2,914 ರಲ್ಲಿ ಪ್ರಾಚೀನ ಅವಶೇಷಗಳು ಕಂಡುಬಂದಿವೆ ಎಂದು  ರೆಡ್ಡಿ ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ASI ಪ್ರಾಚೀನ ಅವಶೇಷಗಳನ್ನು ಅನ್ವೇಷಿಸಲು ಮತ್ತು ದಾಖಲಿಸಲು ನಿಯಮಿತವಾಗಿ ಗ್ರಾಮದಿಂದ ಗ್ರಾಮಕ್ಕೆ ಸಮೀಕ್ಷೆ ನಡೆಸುತ್ತದೆ ಎಂದು ಅವರು ಹೇಳಿದರು.

“ಸ್ವಾತಂತ್ರ್ಯದ ನಂತರ 19 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಕೇಂದ್ರೀಯ-ರಕ್ಷಿತ ಸ್ಮಾರಕಗಳು/ಸ್ಥಳಗಳಿಂದ 486 ವಸ್ತುಗಳನ್ನು ಒಳಗೊಂಡ 210 ಕಳ್ಳತನಗಳು ವರದಿಯಾಗಿವೆ ಎಂದು ಅಂದಾಜಿಸಲಾಗಿದೆ” ಎಂದು ಹೇಳಿದ್ದಾರೆ.

ಕಳ್ಳತನವಾದ ವಸ್ತುಗಳ ಮರುಪಡೆಯುವಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಇದುವರೆಗೆ 91 ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top