ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಳಿಕ ಇದೀಗ ಬಹುಭಾಷಾ ನಟ ಪ್ರಕಾಶ್ ರೈಯವರು ತೆಲಂಗಾಣದ ಅತಿ ಹಿಂದುಳಿದ ಗ್ರಾಮವೊಂದನ್ನು ದತ್ತು ತೆಗೆದುಕೊಳ್ಳಲು ಮುಂದಾಗಿದ್ದಾರೆ.
ತೆಲಂಗಾಣದ ಪಂಚಾಯತ್ ರಾಜ್ ಸಚಿವ ಕೆ ತಾರಕರಾಮ ಅವರನ್ನು ಭೆಟಿಯಾದ ರೈ, ಕೊಂಡರೆಟ್ಟಿಪಲ್ಲೆ ಗ್ರಾಮವನ್ನು ದತ್ತು ತೆಗೆದುಕೊಳ್ಳುವ ಇಂಗಿತ ವ್ಯಕ್ತಪಡಿಸಿದರು. ಇತ್ತೀಚಿಗೆ ಪ್ರಕಾಶ್ ರಾಜ್ ಫೌಂಡೇಶನ್ ಸ್ಥಾಪಿಸಿರುವ ಅವರು ಅದರ ಮೂಲಕ ಅನೇಕ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಂದಾಗಿದ್ದಾರೆ.
ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ಈ ಗ್ರಾಮದಲ್ಲಿ ಕೃಷಿ ಮಾಡುವುದು, ಮೂಲಸೌಕರ್ಯಗಳನ್ನು ಒದಗಿಸುವುದು ಹಾಗೂ ರೈತರಿಗೆ ಸಹಾಯ ಮಾಡುವ ಮಹತ್ವದ ಗುರಿಯನ್ನು ಪ್ರಕಾಶ್ ಹೊಂದಿದ್ದಾರೆ.
ಮಹೇಶ್ ಬಾಬು ಅವರು ಮೆಹಬೂಬ್ ನಗರದಲ್ಲಿ ಗ್ರಾಮವೊಂದನ್ನು ದತ್ತುಪಡೆದುಕೊಳ್ಳುವುದಾಗಿ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.