News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮು-ಕಾಶ್ಮೀರ: ಬುದ್ಗಾಂ ಎನ್‌ಕೌಂಟರ್‌ನಲ್ಲಿ 3 ಲಷ್ಕರ್‌ ಉಗ್ರರ ಬಂಧನ

ಬುದ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ನಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಬುಧವಾರ ಭದ್ರತಾ ಪಡೆಗಳು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್‌ ಇ ತೋಯ್ಪಾದ “ದಿ ರೆಸಿಸ್ಟೆನ್ಸ್ ಫ್ರಂಟ್”ಗೆ ಸೇರಿದ  ಭಯೋತ್ಪಾದಕರನ್ನು ಬಂಧನಕ್ಕೆ ಒಳಪಡಿಸಿದೆ.

ರಾಹುಲ್ ಭಟ್ ಮತ್ತು ಅಮರೀನ್ ಭಟ್ ಸೇರಿದಂತೆ ಹಲವಾರು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಲತೀಫ್ ರಾಥರ್ ಕೂಡ ಸಿಕ್ಕಿಬಿದ್ದಿದ್ದಾನೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

“ಭಯೋತ್ಪಾದಕ ಲತೀಫ್ ಸೇರಿದಂತೆ ಭಯೋತ್ಪಾದಕ ಸಂಘಟನೆ ಲಾಷ್ಕರ್‌ ಇ ತೋಯ್ಪಾ(ಟಿಆರ್‌ಎಫ್) ನ 3 ಭಯೋತ್ಪಾದಕರು ಪ್ರಸ್ತುತ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ. ಭಯೋತ್ಪಾದಕ ಲತೀಫ್ ಎಂಬಾತ ರಾಹುಲ್ ಭಟ್ ಮತ್ತು ಅಮ್ರೀನ್ ಭಟ್ ಸೇರಿದಂತೆ ಹಲವಾರು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದಾನೆ” ಎಂದು ಕಾಶ್ಮೀರ ವಲಯ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕರು ತಿಳಿಸಿದ್ದಾರೆ.

ಚದೂರ ತಹಸಿಲ್ ಕಚೇರಿಯ ಉದ್ಯೋಗಿ ರಾಹುಲ್ ಭಟ್ ಅವರನ್ನು ಮೇ 12 ರಂದು ಅವರ ಕಚೇರಿಯಲ್ಲಿ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರೆ, ಕಾಶ್ಮೀರಿ ಟಿವಿ ನಟ ಅಮ್ರೀನ್ ಭಟ್ ಅವರನ್ನು ಮೇ 26 ರಂದು ಬುದ್ಗಾಮ್‌ನ ಚದೂರ ಪ್ರದೇಶದಲ್ಲಿ ಅಪರಿಚಿತ ಭಯೋತ್ಪಾದಕರು ಹತ್ಯೆ ಮಾಡಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top