ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಗೂ ಕೆಲವೇ ದಿನಗಳು ಇರುವಂತೆ ಸುಮಾರು 30 ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ವಶಪಡಿಸಿಕೊಳ್ಳುವ ಮೂಲಕ ಭದ್ರತಾ ಪಡೆಗಳು ಬುಧವಾರ ದೊಡ್ಡ ದುರಂತವನ್ನು ತಪ್ಪಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ನೀಡಿದ ನಿರ್ದಿಷ್ಟ ಮಾಹಿತಿಯ ನಂತರ ಐಇಡಿ ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಹೇಳಿದ್ದಾರೆ.
“ಸುಮಾರು 25 ರಿಂದ 30 ಕೆಜಿ ತೂಕದ ಐಇಡಿಯನ್ನು ಪುಲ್ವಾಮಾದ ಸರ್ಕ್ಯುಲರ್ ರಸ್ತೆಯ ತಹಾಬ್ ಕ್ರಾಸಿಂಗ್ ಬಳಿ ಪೊಲೀಸ್ ಮತ್ತು ಭದ್ರತಾ ಪಡೆಗಳಿಂದ ವಶಪಡಿಸಿಕೊಂಡಿದೆ. ಪುಲ್ವಾಮಾ ಪೊಲೀಸರು ನೀಡಿದ ನಿರ್ದಿಷ್ಟ ಮಾಹಿತಿಯಿಂದ ದೊಡ್ಡ ದುರಂತವನ್ನು ತಪ್ಪಿಸಲಾಗಿದೆ” ಎಂದು ಎಡಿಜಿಪಿ ಕಾಶ್ಮೀರ ಟ್ವಿಟರ್ನಲ್ಲಿ ಹೇಳಿಕೊಂಡಿದ್ದಾರೆ.
J&K | An IED weighing approx 25 to 30 Kgs recovered near Tahab Crossing on Circular road in Pulwama by Police and security forces. A major tragedy has been averted by specific input generated by Pulwama Police: ADGP Kashmir Vijay Kumar pic.twitter.com/KHD5565jKY
— ANI (@ANI) August 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.