News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮುನ್ನೆಚ್ಚರಿಕಾ ಡೋಸ್‌ ಆಗಿ ಕಾರ್ಬೆವ್ಯಾಕ್ಸ್‌ ಬಳಸಲು ಅನುಮೋದನೆ

ನವದೆಹಲಿ: ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್‌ ಲಸಿಕೆಯನ್ನು ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್‌ ಆಗಿ ಪಡೆಯಲು ಬಯೋಲಾಜಿಕಲ್ ಇ‌ ಸಂಸ್ಥೆಯ ಕಾರ್ಬೆವ್ಯಾಕ್ಸ್ ಅನ್ನು ಸರ್ಕಾರವು ಅನುಮೋದಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಭಾರತದಲ್ಲಿ ಹೆಟೆರೊಲಾಜಸ್ ಕೋವಿಡ್-19 ಬೂಸ್ಟರ್ ಆಗಿ ಅನುಮೋದಿಸಲ್ಪಟ್ಟ ಮೊದಲ ಲಸಿಕೆ ಇದಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅನುಮೋದನೆಯು ಇಮ್ಯುನೈಸೇಶನ್‌ನ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್‌ಟಿಎಜಿಐ) ಕೋವಿಡ್-19 ವರ್ಕಿಂಗ್ ಗ್ರೂಪ್ ಇತ್ತೀಚೆಗೆ ಮಾಡಿದ ಶಿಫಾರಸುಗಳನ್ನು ಆಧರಿಸಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

“18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆಗಳ ಎರಡನೇ ಡೋಸ್ ನೀಡಿದ ದಿನಾಂಕದಿಂದ ಆರು ತಿಂಗಳುಗಳು ಅಥವಾ 26 ವಾರಗಳ ನಂತರ ಕಾರ್ಬೆವ್ಯಾಕ್ಸ್ ಅನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದು” ಎಂದು ಮೂಲಗಳು ತಿಳಿಸಿವೆ.

Co-WIN ಪೋರ್ಟಲ್‌ನಲ್ಲಿ ಕಾರ್ಬೆವ್ಯಾಕ್ಸ್ ಲಸಿಕೆಯ ಮುನ್ನೆಚ್ಚರಿಕೆಯ ಡೋಸ್‌ನ ನೀಡಿಕೆಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಬದಲಾವಣೆಗಳನ್ನು ಮಾಡಲಾಗುತ್ತಿದೆ.

ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ RBD ಪ್ರೊಟೀನ್ ಉಪಘಟಕ ಲಸಿಕೆ ಕಾರ್ಬೆವ್ಯಾಕ್ಸ್‌  ಅನ್ನು ಪ್ರಸ್ತುತ ಕೋವಿಡ್-19 ಲಸಿಕೆ ಕಾರ್ಯಕ್ರಮದ ಅಡಿಯಲ್ಲಿ 12 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ  ಬಳಸಲಾಗುತ್ತಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top