News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೈಸೂರು ದಸರಾ: ಗಜಪಡೆಗೆ ಪೂಜೆ ಸಲ್ಲಿಸಿ ಸ್ವಾಗತ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಅರಮನೆ ಆವರಣದಲ್ಲಿನ ಜಯಮಾರ್ತಾಂಡ ದ್ವಾರದಲ್ಲಿ ಇಂದು ಸ್ವಾಗತ ಕೋರಲಾಯಿತು.

ಬೆಳಗ್ಗೆ 9:20 ರಿಂದ 10:00ರ ಕನ್ಯಾ ಲಗ್ನದಲ್ಲಿ ಅಂಬಾರಿ ಹೊರಲಿರುವ ಅಭಿಮನ್ಯು ಹಾಗೂ ಭೀಮ, ಮಹೇಂದ್ರ, ಗೋಪಾಲಸ್ವಾಮಿ, ಅರ್ಜುನ, ಧನಂಜಯ, ಕಾವೇರಿ, ಚೈತ್ರ, ಲಕ್ಷ್ಮಿ ಆನೆಗಳಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಡೆಯನ್ನು ಸ್ವಾಗತಿಸಲಾಯಿತು.

ಮಂಗಳ ವಾದ್ಯ, ಕಲಾತಂಡಗಳ ಜೊತೆಗೆ, ಪೂರ್ಣಕುಂಭ ಸ್ವಾಗತದ ಮೂಲಕ ಜಯಮಾರ್ತಾಂಡ ದ್ವಾರದಿಂದ ಅರಮನೆಯ ಆನೆ ಬಾಗಿಲಿಗೆ ಗಜಪಡೆಯನ್ನು ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕಾವಾಡಿಗರು ಮತ್ತು ಮಾವುತರಿಗೆ ಮೂಲಭೂತ ಸಾಮಾಗ್ರಿಗಳನ್ನು ವಿತರಿಸಿ ದಸರಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಶುಭಕೋರಿ ಫಲ ತಾಂಬೂಲ ನೀಡಲಾಯಿತು. ಬಳಿಕ ಅರಮನೆಯ ಗೊಂಬೆ ತೊಟ್ಟಿಯಲ್ಲಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿದೇವಿಗೆ ಪೂಜೆ ಸಲ್ಲಿಸಲಾಯಿತು.

15 ದಿನದ ಮುಂಚಿತವಾಗಿ ದಸರಾ ವಸ್ತು ಪ್ರದರ್ಶನ ಉದ್ಘಾಟನೆ ಆಗಲಿದೆ. ಪುಷ್ಪ ಪ್ರದರ್ಶನದ ಆರಂಭದ ಮೊದಲ ದಿನ ಉಚಿತ ಪ್ರವೇಶ ಇರಲಿದೆ. ದಸರಾ ಉದ್ಘಾಟಕರ ಬಗ್ಗೆ ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top