ನವದೆಹಲಿ: ಜಗದೀಪ್ ಧನ್ಕರ್ ಅವರು ಭಾರತದ 14ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಧನ್ಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಜಗದೀಪ್ ಧನ್ಕರ್ ಅವರು ಆಗಸ್ಟ್ 6 ರಂದು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದರು, ಅವರು 74.36 ಶೇಕಡಾ ಮತಗಳನ್ನು ಪಡೆದುಕೊಂಡು ಹುದ್ದೆಗೆ ಆಯ್ಕೆಯಾಗಿದ್ದಾರೆ. 1997 ರಿಂದ ನಡೆದ ಕೊನೆಯ ಆರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಪಡೆದ ಅತ್ಯಧಿಕ ಮತಗಳು ಇದಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಹಲವು ನಾಯಕರು ನೂತನ ಉಪರಾಷ್ಟ್ರಪತಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಪ್ರಮಾಣವಚನಕ್ಕೂ ಮುನ್ನ, ಧನ್ಕರ್ ಅವರು ದೆಹಲಿಯ ರಾಜ್ ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.