ನವದೆಹಲಿ: ಇಂದು ಗಜರಾಜನಿಗೆ ಮೀಸಲಾದ ದಿನವಾಗಿದೆ. ವಿಶ್ವದ ಪರಿಸರ ವ್ಯವಸ್ಥೆಯಲ್ಲಿ ಆನೆಯ ಪ್ರಾಮುಖ್ಯತೆಯನ್ನು ಗುರುತಿಸಲು ಪ್ರತಿ ವರ್ಷ ಆ.12 ಅನ್ನು ʼವಿಶ್ವ ಆನೆ ದಿನʼವನ್ನಾಗಿ ಆಚರಣೆ ಮಾಡಲಾಗುತ್ತದೆ.
ವಿಶ್ವ ಆನೆಗಳ ದಿನದಂದು ಪ್ರಧಾನಿ ನರೇಂದ್ರ ಮೋದಿ, ಅವರು ಕಳೆದ ಎಂಟು ವರ್ಷಗಳಲ್ಲಿ ದೇಶದಲ್ಲಿ ಆನೆಗಳ ಸಂಖ್ಯೆ ಹೆಚ್ಚಿದೆ ಏಷ್ಯಾದ ಆನೆಗಳ ಪೈಕಿ ಸುಮಾರು 60 ಪ್ರತಿಶತದಷ್ಟು ಆನೆಗಳು ಭಾರತದಲ್ಲೇ ಇವೆ ಎಂದಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, ಆನೆಯನ್ನು ರಕ್ಷಿಸಲು ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
“ಮಾನವ-ಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡಲು ಮತ್ತು ಸ್ಥಳೀಯ ಸಮುದಾಯಗಳನ್ನು ಮತ್ತು ಪರಿಸರ ಪ್ರಜ್ಞೆಯನ್ನು ಹೆಚ್ಚಿಸುವಲ್ಲಿ ಅವರ ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಸಂಯೋಜಿಸಲು ಭಾರತದಲ್ಲಿ ನಡೆಯುತ್ತಿರುವ ದೊಡ್ಡ ಪ್ರಯತ್ನಗಳ ಸಂದರ್ಭದಲ್ಲಿ ಆನೆ ಸಂರಕ್ಷಣೆಯ ಯಶಸ್ಸನ್ನು ಕಂಡಿದೆ” ಎಂದು ಅವರು ಹೇಳಿದರು.
ಅಲ್ಲದೇ ಆನೆಗಳ ರಕ್ಷಣೆಯಲ್ಲಿ ತೊಡಗಿರುವ ಎಲ್ಲರನ್ನು ಪ್ರಧಾನಿ ಶ್ಲಾಘಿಸಿದರು.
ʼವಿಶ್ವ ಆನೆ ದಿನʼವನ್ನು ಮೊದಲ ಬಾರಿಗೆ ಆಗಸ್ಟ್ 12, 2012 ರಂದು ಆಚರಿಸಲಾಯಿತು. ಆನೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವುದು, ಅವುಗಳ ಸಂರಕ್ಷಣೆಯ ಕಡೆಗೆ ಗಮನ ಹರಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ.
On #WorldElephantDay, reiterating our commitment to protect the elephant. You would be happy to know that India houses about 60% of all Asian elephants. The number of elephant reserves has risen in the last 8 years. I also laud all those involved in protecting elephants. pic.twitter.com/E1BnabkWUz
— Narendra Modi (@narendramodi) August 12, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.