ನವದೆಹಲಿ: ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಾಲ್ಕನೇ ಪುಣ್ಯತಿಥಿಯಾಗಿದ್ದು, ದೇಶವು ಅವರನ್ನು ಸ್ಮರಿಸುತ್ತಿದೆ.
2018 ರ ಆಗಸ್ಟ್ 16ರಂದು ಅವರು ನಿಧನರಾದರು. 1924 ರ ಡಿಸೆಂಬರ್ 25 ರಂದು ಗ್ವಾಲಿಯರ್ನಲ್ಲಿ ಅವರು ಜನಿಸಿದರು. ಸಾರ್ವಜನಿಕ ಜೀವನ ಮತ್ತು ಭಾರತದ ಅಭಿವೃದ್ಧಿಗೆ ಅಟಲ್ ಬಿಹಾರಿ ವಾಜಪೇಯಿ ಅವರ ಕೊಡುಗೆಯನ್ನು ರಾಜಕೀಯ ಮೀರಿಯೂ ಗೌರವಿಸಲಾಗುತ್ತದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ಸದೈವ್ ಅಟಲ್ಗೆ ಇಂದು ಬೆಳಗ್ಗೆ ಭೇಟಿ ನೀಡಿ, ಪುಷ್ಪ ನಮನ ಸಲ್ಲಿಸಿದರು.
#WATCH | Delhi: Vice President Jagdeep Dhankhar pays floral tribute to former Prime Minister #AtalBihariVajpayee on his death anniversary, at Sadaiv Atal. pic.twitter.com/yLvKbKNFNs
— ANI (@ANI) August 16, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.