ನವದೆಹಲಿ: ಕಳೆದ ಕೆಲವು ತಿಂಗಳುಗಳಿಂದ ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮತ್ತು ಇತರ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ಉದ್ದೇಶಿತ ಹತ್ಯೆಗಳ ಸರಣಿಗೆ ಮತ್ತೊಂದು ಸೇರ್ಪಡೆಯಾಗಿದೆ. ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡಿರುವ ಆಕ್ರೋಶದ ನಡುವೆಯೇ ಇಂದಿನ ದಾಳಿ ನಡೆದಿದೆ.
ಮಂಗಳವಾರ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ಒಬ್ಬ ನಾಗರಿಕನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ ಮತ್ತು ಮತ್ತೊಬ್ಬರು ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ಶೋಪಿಯಾನ್ನ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ಭಯೋತ್ಪಾದಕರು ನಾಗರಿಕರ ಮೇಲೆ ಗುಂಡು ಹಾರಿಸಿದ್ದಾರೆ.
ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. “ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರದೇಶವನ್ನು ಸುತ್ತುವರಿಯಲಾಗಿದೆ ” ಎಂದು ಪೊಲೀಸರು ಹೇಳಿದ್ದಾರೆ.
ಮೃತರು ಮತ್ತು ಗಾಯಾಳು ಸಹೋದರರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಚೋಟಿಗಾಮ್ ಪ್ರದೇಶದಲ್ಲಿ ಅರ್ಜುನ್ ನಾಥ್ ಕುಮಾರ್ ಅವರ ಮಕ್ಕಳಾದ ಸುನೀಲ್ ಕುಮಾರ್ ಮತ್ತು ಪಿಂಟು ಕುಮಾರ್ ಎಂದು ಗುರುತಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.