ಬೆಂಗಳೂರು: ಕ್ರೀಡಾ ಪಟುಗಳಿಗೆ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ನೀಡುವ ಬಗ್ಗೆ ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾಗವಹಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾ ಪಟುಗಳಿಗೆ ಹಾಗೂ ಅಮೃತ ಕ್ರೀಡಾ ದತ್ತು ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 75 ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ವೇಳೆ ಮಾತನಾಡಿದ ಬೊಮ್ಮಾಯಿ, ಬೇರೆ ಇಲಾಖೆಗಳಲ್ಲೂ ಕ್ರೀಡಾ ಪಟುಗಳಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಕಡತ ನನ್ನ ಬಳಿ ಇದೆ. ಆ ಕಡತಕ್ಕೆ ಶೀಘ್ರದಲ್ಲೇ ಸಹಿ ಹಾಕಿ ಆದೇಶ ಹೊರಡಿಸುತ್ತೇನೆ ಎಂದು ತಿಳಿಸಿದರು.
ಕ್ರೀಡಾ ಮನೋಭಾವದಿಂದ ಶಿಸ್ತು, ಹೆಚ್ಚು ಸಾಧಿಸುವ ಇಚ್ಛಾ ಶಕ್ತಿ ಬರುತ್ತದೆ. ಶಿಸ್ತಿನಿಂದ ನಿಮಗೆ ಕ್ಯಾರೆಕ್ಟರ್ ಬಿಲ್ಡ್ ಆಗುತ್ತದೆ. ಇದು ಬಹಳ ಮುಖ್ಯ. ಚಾರಿತ್ರ್ಯ ಬೆಳೆಸಿಕೊಳ್ಳಲು ನೀವೆಲ್ಲರೂ ಯತ್ನಿಸಬೇಕು. ಆಗ ನೀವು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಸಲಹೆ ನೀಡಿದರು.
ನೌಕರಿಗಾಗಿ ಕ್ರೀಡೆ ಆಡಬೇಡಿ. ನೀವು ಮೊದಲಿಗೆ ದೇಶಕ್ಕಾಗಿ ಆಡಿ. ಗೆಲ್ಲೋದಕ್ಕಾಗಿ ಆಡಿ. ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ. ನಿಮ್ಮ ಸುರಕ್ಷತೆ ನೋಡುತ್ತದೆ. ನಿಮಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಎಂದರು.
ಕಾಮನವೆಲ್ತ್-2022 ಕ್ರೀಡಾಕೂಟದಲ್ಲಿ ಭಾಗವಹಿಸಿದ ಮತ್ತು ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸನ್ಮಾನ ಸಮಾರಂಭ ಹಾಗೂ ಅಮೃತ ಕ್ರೀಡಾ ದತ್ತು ಯೋಜನೆಯ ಕ್ರೀಡಾಪಟುಗಳೊಂದಿಗೆ ಸಂವಾದ ಕಾರ್ಯಕ್ರಮ.
https://t.co/NPsNAU03n5— CM of Karnataka (@CMofKarnataka) August 16, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.