ಮ್ಯಾಡ್ರಿಡ್: ಚೀನಾದ ಕಮ್ಯುನಿಸ್ಟ್ ಆಡಳಿತ ತನ್ನ ಜನರ ಮೂಲಭೂತ ಹಕ್ಕುಗಳನ್ನು ಯಾವ ರೀತಿಯಲ್ಲಿ ಮೊಟಕುಗೊಳಿಸುತ್ತಿದೆ ಎಂಬುದಕ್ಕೆ ಹಲವಾರು ಉದಾಹರಣೆಗಳು ಸಿಗುತ್ತವೆ. ಆದರೆ ಈಗ ಹೊರ ಬಿದ್ದಿರುವ ವರದಿ ನಿಜಕ್ಕೂ ಭಯಾನಕವಾಗಿದೆ.
ಕಮ್ಯುನಿಸ್ಟ್ ಆಡಳಿತದ ವಿರುದ್ಧ ಧ್ವನಿಯೆತ್ತುವ ಜನರನ್ನು ಅಲ್ಲಿನ ಸರ್ಕಾರವು ಹುಚ್ಚಾಸ್ಪತ್ರೆಗೆ ಸೇರಿಸುತ್ತಿದೆ ಎಂದು ಎನ್ಜಿಒವೊಂದರ ವರದಿ ತಿಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಮಾತನಾಡುವವರನ್ನು, ಪ್ರಜಾಪ್ರಭುತ್ವ ಹೋರಾಟಗಾರರನ್ನು ಹತ್ತಿಕ್ಕುವ ಸಲುವಾಗಿ ಚೀನಾ ಅವರನ್ನು ಮಾನಸಿಕ ಆಸ್ವಸ್ಥರು ಎಂದು ಬಿಂಬಿಸಿ ಆಸ್ಪತ್ರೆಗೆ ದಾಖಲಿಸುತ್ತಿದೆ.
2015-2021ರ ಅವಧಿಯಲ್ಲಿ ಸರ್ಕಾರದ ವಿರುದ್ಧ ಧ್ವನಿಯೆತ್ತಿದ್ದ 99 ಮುಖಂಡರನ್ನು ಚೀನಾ ಸರ್ಕಾರ ಹುಚ್ಚಾಸ್ಪತ್ರೆಗೆ ದಾಖಲಿಸಿದೆ ಎಂದು ವರದಿ ತಿಳಿಸಿದೆ.
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮತ್ತು ಅವರ ಆಡಳಿತದ ಚೈನೀಸ್ ಕಮ್ಯುನಿಸ್ಟ್ ಪಾರ್ಟಿ ತಮ್ಮ ವಿರುದ್ಧ ಮಾತನಾಡುವವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಔಷದ ಪ್ರಯೋಗ ಮಾಡುತ್ತಿದೆ, ಈ ನಿಟ್ಟಿನಲ್ಲಿ ಅದು ಹುಚ್ಚಾಸ್ಪತ್ರೆಯ ವೈದ್ಯರಿಗೆ ನಿರ್ದೇಶನವನ್ನು ಕೂಡ ನೀಡಿದೆ ಎಂದು ವರದಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.