ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರಿಗೂ ಮತದಾನ ಮಾಡುವ ಅವಕಾಶವನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆ ರಾಜ್ಯ 25 ಲಕ್ಷ ಹೊಸ ಮತದಾರರನ್ನು ಹೊಂದುವ ಸಾಧ್ಯತೆಯಿದೆ.
ಜಮ್ಮು ಮತ್ತು ಕಾಶ್ಮೀರವು ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಚುನಾಯಿತ ಸರ್ಕಾರವಿಲ್ಲದೆ ಇದೆ. ಮುಂದಿನ ವರ್ಷ ಅಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರು ಮತದಾರರಾಗಿ ನೋಂದಾಯಿಸಲು ಅನುವು ಮಾಡಿಕೊಡುತ್ತದೆ. 2019 ರಲ್ಲಿ ಕೇಂದ್ರವು 370 ನೇ ವಿಧಿಯ ಅಡಿಯಲ್ಲಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ, ಕಾಶ್ಮೀರೇತರರಿಗೆ ಮತ ಚಲಾಯಿಸಲು ಮತ್ತು ಭೂಮಿಯನ್ನು ಹೊಂದಲು ಸಂವಿಧಾನಿಕ ಅವಕಾಶ ಸಿಕ್ಕಿದೆ.
ಜಮ್ಮು ಮತ್ತು ಕಾಶ್ಮೀರ ಮುಖ್ಯ ಚುನಾವಣಾಧಿಕಾರಿ ಹಿರ್ದೇಶ್ ಕುಮಾರ್ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಗೆ ಮುನ್ನ ಈ ಪ್ರದೇಶದಲ್ಲಿ 20 ಲಕ್ಷಕ್ಕೂ ಹೆಚ್ಚು ಹೊಸ ಮತದಾರರು ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ. ಇದು ಮೂರನೇ ಒಂದು ಭಾಗದಷ್ಟು ಮತದಾರರ ಸಂಖ್ಯೆಯನ್ನು ಹೆಚ್ಚಿಸಬಹುದು ಎಂದಿದ್ದಾರೆ.
“ನಾವು ಅಂತಿಮ ಪಟ್ಟಿಯಲ್ಲಿ ಕಾಶ್ಮೀರೇತರರು ಸೇರಿದಂತೆ ಹೊಸ ಮತದಾರರ ಸೇರ್ಪಡೆಯನ್ನು ನಿರೀಕ್ಷಿಸುತ್ತಿದ್ದೇವೆ” ಎಂದು ಕುಮಾರ್ ಹೇಳಿದ್ದಾರೆ.
ಈ ಕ್ರಮದ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.