ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20 ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಇಂದು ಬೆಳಿಗ್ಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದೆ.
ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ದಾಳಿ ನಡೆಸಲಾಗುತ್ತಿದೆ.
ತನಿಖಾ ತಂಡಗಳು ಮಾಜಿ ಅಬಕಾರಿ ಆಯುಕ್ತ ಇ.ಗೋಪಿಕೃಷ್ಣನ್, ಇಬ್ಬರು ಸಾರ್ವಜನಿಕ ಸೇವಕರು ಮತ್ತು ಇತರರ ಮನೆಗಳ ಮೇಲೂ ದಾಳಿ ನಡೆಸುತ್ತಿವೆ.
ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಮತ್ತು ಇತರರ ವಿರುದ್ಧದ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿದೆ. ದೆಹಲಿ ಸರ್ಕಾರದ ಮದ್ಯ ನೀತಿಯಲ್ಲಿ ಹಲವು ಲೋಪದೋಷಗಳಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಸಿಬಿಐಗೆ ಮನವಿ ಮಾಡಿದ್ದರು.
#WATCH | No matter how hard a corrupt person tries to prove himself innocent, he will still remain corrupt. This is not the first case of corruption by AAP. There has been huge corruption in the liquor stores in Delhi: Union Min Anurag Thakur on CBI raids at Dy CM’s residence pic.twitter.com/gFdlj1OblC
— ANI (@ANI) August 19, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.