ನವದೆಹಲಿ: ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಇಂದು ಮತ್ತೊಂದು ಮೈಲಿಗಲ್ಲು ದಾಖಲಿಸಿದ್ದು, ದೇಶದ 1,01,462 ಗ್ರಾಮಗಳು ಒಡಿಎಫ್ (ಬಯಲು ಶೌಚ ಮುಕ್ತ) ಎಂದು ಘೋಷಿಸಿಕೊಂಡಿವೆ. ತೆಲಂಗಾಣ, ತಮಿಳುನಾಡು, ಒಡಿಶಾ, ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶಗಳು ಮೊದಲ ಐದು ಅತ್ಯುತ್ತಮ ಪ್ರದರ್ಶನ ನೀಡಿದ ರಾಜ್ಯಗಳಾಗಿವೆ, ಅಲ್ಲಿ ಗರಿಷ್ಠ ಸಂಖ್ಯೆಯ ಹಳ್ಳಿಗಳನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಲಾಗಿದೆ.
ಸುಮಾರು ಎಂಟು ವರ್ಷಗಳ ಹಿಂದೆ, ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿಯವರ 150 ನೇ ಜನ್ಮ ವಾರ್ಷಿಕೋತ್ಸವದಂದು ದೇಶವನ್ನು ಬಯಲು ಶೌಚ ಮುಕ್ತವಾಗಿಸುವ ದೃಷ್ಟಿಯೊಂದಿಗೆ ಸ್ವಚ್ಛ ಭಾರತ್ ಮಿಷನ್ ಅನ್ನು ಪ್ರಾರಂಭಿಸಿದರು. ಅದು ಇಂದು ಫಲ ನೀಡುತ್ತಿದೆ.
ಒಂದು ಲಕ್ಷ ಬಯಲು ಶೌಚ ಮುಕ್ತ ಹಳ್ಳಿಗಳು ಸಣ್ಣ ಸಾಧನೆಯಲ್ಲ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಪ್ರಕ್ರಿಯೆಯು ತಾಂತ್ರಿಕ ಸ್ವರೂಪದಲ್ಲಿದೆ, ಇದು ಗ್ರಾಮೀಣ ಭಾರತಕ್ಕೆ ತುಲನಾತ್ಮಕವಾಗಿ ಹೊಸದು ಮತ್ತು ಎರಡನೇ ತಲೆಮಾರಿನ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.