ಇಸ್ಲಮಾಬಾದ್: ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ಬಳಿಕ ಒಂದೊಂದೇ ಕಷ್ಟಗಳು ಎದುರಾಗುತ್ತಿವೆ. ಇದೀಗ ಅವರ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಕೇಸ್ ದಾಖಲಾಗಿದೆ.
ಇಸ್ಲಾಮಾಬಾದ್ನಲ್ಲಿ ಸಮಾವೇಶ ನಡೆಸಿದ್ದ ವೇಳೆ ನ್ಯಾಯಾಧೀಶರು ಹಾಗೂ ಇಬ್ಬರು ಉನ್ನತ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ ಇಮ್ರಾನ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.
ಶನಿವಾರ ಸಂಜೆ ಎಫ್ -9 ಪಾರ್ಕ್ನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಸರ್ಕಾರಿ ಸಂಸ್ಥೆಗಳ ವಿರುದ್ಧ ಬೆದರಿಕೆ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ಅವರು ನೀಡಿದ್ದರು. ಇದಾದ ಕೆಲವೇ ಗಂಟೆಗಳ ನಂತರ ಅವರ ನೇರ ಭಾಷಣಗಳನ್ನು ಪ್ರಸಾರ ಮಾಡುವುದನ್ನು ಪಾಕಿಸ್ಥಾನ್ ಎಲೆಕ್ಟ್ರಾನಿಕ್ ಮೀಡಿಯಾ ರೆಗ್ಯುಲೇಟರಿ ಅಥಾರಿಟಿ ನಿಷೇಧಿಸಿತು.
ಅವರು ಸರ್ಕಾರಿ ಸಂಸ್ಥೆಗಳು ಮತ್ತು ಅಧಿಕಾರಿಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳ ಮೂಲಕ ದ್ವೇಷಪೂರಿತ ಭಾಷಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಅಥಾರಿಟಿ ತನ್ನ ನಿರ್ದೇಶನದಲ್ಲಿ ತಿಳಿಸಿದೆ.
ಅವರ ಭಾಷಣಕ್ಕೆ ಸಂಬಂಧಿಸಿದಂತೆ ಇದೀಗ ಅವರು ಮೇಲೆ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಪ್ರಕೃಣ ದಾಖಲು ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.