ನವದೆಹಲಿ: ಯುಪಿಐ ಆಧರಿತ ಪಾವತಿಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಈ ಮೂಲಕ ಎದ್ದಿದ್ದ ಗೊಂದಲವನ್ನು ಶಮನ ಮಾಡಿದೆ.
‘ಡಿಜಿಟಲ್ ಸೇವಾದಾತರಿಗೆ ಖರ್ಚು ಇದೆ. ಆದರೆ ಈ ಖರ್ಚು ಭರಿಸಲು ಪರ್ಯಾಯ ಮಾರ್ಗಗಳನ್ನು ಹುಡುಕಬೇಕಿದೆ. ಒಟ್ಟಾರೆಯಾಗಿ ಡಿಜಿಟಲ್ ವಹಿವಾಟು ಹೆಚ್ಚಾಗುವುದು ಸಮಾಜ ಹಾಗೂ ಉತ್ಪಾದಕತೆಗೆ ಹಲವು ರೀತಿಯಲ್ಲಿ ಅನುಕೂಲವಾಗಿದೆ. ಡಿಜಿಟಲ್ ಪಾವತಿಗಳಿಗೆ ಪೂರಕ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರವು ನೆರವು ನೀಡುತ್ತಾ ಬಂದಿದೆ. ಆ ನೆರವು ಈ ವರ್ಷವೂ ಮುಂದುವರಿಯಲಿದೆ’ ಎಂದು ಹಣಕಾಸು ಸಚಿವಾಲಯ ಹೇಳಿದೆ.
ಡಿಜಿಟಲ್ ವಹಿವಾಟಿಗೆ ಶುಲ್ಕ ವಿಧಿಸುವ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಕರಡು ಪ್ರಸ್ತಾಪವನ್ನು ಜನರ ಮುಂದಿಟ್ಟು ಪ್ರತಿಕ್ರಿಯೆಯನ್ನು ಆಹ್ವಾನಿಸಿತ್ತು. ಪ್ರತಿ ವಹಿವಾಟಿಗೂ ಡಿಜಿಟಲ್ ಸೇವಾದಾತರಿಗೆ ಒಂದಿಷ್ಟು ಖರ್ಚು ಬರುತ್ತದೆ. ಅದನ್ನು ಬಳಕೆದಾರರೇ ತುಂಬಬೇಕು ಪ್ರಸ್ತಾಪದಲ್ಲಿ ಹೇಳಲಾಗಿತ್ತು. ಈ ಪ್ರಸ್ತಾವಕ್ಕೆ ಜನರಿಂದ ವಿರೋಧ ವ್ಯಕ್ತವಾಗಿದೆ.
ಕೊನೆಗೆ ಎಚ್ಚೆತ್ತ ಹಣಕಾಸು ಸಚಿವಾಲಯ ಶುಲ್ಕ ವಿಧಿಸುವ ಯಾವ ಉದ್ದೇಶವೂ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
UPI is a digital public good with immense convenience for the public & productivity gains for the economy. There is no consideration in Govt to levy any charges for UPI services. The concerns of the service providers for cost recovery have to be met through other means. (1/2)
— Ministry of Finance (@FinMinIndia) August 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.