ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪಂಜಾಬ್ನ ಮೊಹಾಲಿಯಲ್ಲಿ “ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ”ವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.
ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆಯ ಅಡಿಯಲ್ಲಿರುವ ಅನುದಾನಿತ ಸಂಸ್ಥೆಯಾದ ಟಾಟಾ ಮೆಮೋರಿಯಲ್ ಸೆಂಟರ್ನಿಂದ ಸುಮಾರು 660 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಇದು 300-ಹಾಸಿಗೆ ಸಾಮರ್ಥ್ಯದ ತೃತೀಯ ಆರೈಕೆ ಆಸ್ಪತ್ರೆಯಾಗಿದೆ. ಇದು ಶಸ್ತ್ರಚಿಕಿತ್ಸೆ, ರೇಡಿಯೊಥೆರಪಿ ಮತ್ತು ಮೆಡಿಕಲ್ ಆಂಕೊಲಾಜಿ – ಕೀಮೋಥೆರಪಿ, ಇಮ್ಯುನೊಥೆರಪಿ ಮತ್ತು ಬೋನ್ ಮ್ಯಾರೋ ಟ್ರಾನ್ಸ್ಪ್ಲಾಂಟ್ ಸೇರಿದಂತೆ ಎಲ್ಲಾ ರೀತಿಯ ಕ್ಯಾನ್ಸರ್ಗಳಿಗೆ ಚಿಕಿತ್ಸೆ ನೀಡಲು ಆಧುನಿಕ ಸೌಲಭ್ಯಗಳನ್ನು ಹೊಂದಿದೆ.
“ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಅದರ ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸುವುದು ಮುಖ್ಯವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕಳೆದ ಎಂಟು ವರ್ಷಗಳಲ್ಲಿ ಸಮಗ್ರ ಆರೋಗ್ಯ ರಕ್ಷಣೆಯನ್ನು ದೇಶದ ಪ್ರಮುಖ ಆದ್ಯತೆಗಳಲ್ಲಿ ಇರಿಸಲಾಗಿದೆ ಎಂದರು.
2014ರ ಮೊದಲು ದೇಶದಲ್ಲಿ 400ಕ್ಕೂ ಕಡಿಮೆ ವೈದ್ಯಕೀಯ ಕಾಲೇಜುಗಳಿದ್ದು, ಕಳೆದ 8 ವರ್ಷಗಳಲ್ಲಿ ದೇಶದಲ್ಲಿ 200ಕ್ಕೂ ಹೆಚ್ಚು ಹೊಸ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಉಪಸ್ಥಿತರಿದ್ದರು.
Speaking at inauguration of Homi Bhabha Cancer Hospital & Research Centre in Mohali, Punjab. https://t.co/llZovhQM5S
— Narendra Modi (@narendramodi) August 24, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.