ನವದೆಹಲಿ: ಈ ವರ್ಷದ ಅಂತ್ಯದ ವೇಳೆಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಎಲೆಕ್ಟ್ರಾನಿಕ್-ಪಾಸ್ಪೋರ್ಟ್ಗಳನ್ನು ಹೊರತರಲು ಸರ್ಕಾರ ಚಿಂತನೆ ನಡೆಸಿದೆ.
ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಡಾ. ಔಸಫ್ ಸಯೀದ್ ಅವರು ಹೈದರಾಬಾದ್ನಲ್ಲಿ ಮಾಧ್ಯಮಗಳಿಗೆ ಈ ಮಾಹಿತಿ ನೀಡಿದ್ದಾರೆ.
ಪಾಸ್ಪೋರ್ಟ್ ಪುಸ್ತಕಕ್ಕೆ ಇ-ಚಿಪ್ ಮತ್ತು ಇನ್ನೂ ಕೆಲವು ವೈಶಿಷ್ಟ್ಯಗಳನ್ನು ಸೇರಿಸಲಾಗುವುದು, ಇದು ಭಾರತೀಯ ಪಾಸ್ಪೋರ್ಟ್ನ ಭದ್ರತಾ ನವೀಕರಣವನ್ನು ಒದಗಿಸುತ್ತದೆ ಮತ್ತು ಯಂತ್ರ ಓದುವಿಕೆಯನ್ನು ಸಕ್ರಿಯಗೊಳಿಸುತ್ತದೆ ಎಂದಿದ್ದಾರೆ.
ವಿದೇಶ್ ಸಂಪರ್ಕ್ ಔಟ್ರೀಚ್ ಕಾರ್ಯಕ್ರಮದ ಭಾಗವಾಗಿ ಕಾರ್ಯದರ್ಶಿ ನೇತೃತ್ವದ ಅಧಿಕಾರಿಗಳ ತಂಡ ಹೈದರಾಬಾದ್ಗೆ ಭೇಟಿ ನೀಡಿದ್ದು, ತೆಲಂಗಾಣ ಸರ್ಕಾರದೊಂದಿಗೆ ಸರಣಿ ಸಭೆಗಳನ್ನು ನಡೆಸಿದೆ.
ವಲಸೆಗಾರರ ಹಿತಾಸಕ್ತಿ ಮುಖ್ಯವಾಗಿದೆ ಎಂದು ಹೇಳಿದ ಕಾರ್ಯದರ್ಶಿ, ಇತರ ದೇಶಗಳಲ್ಲಿ ಕೆಲಸ ಮಾಡಲು ವಲಸೆ ಹೋಗುತ್ತಿರುವ ಭಾರತೀಯ ನಾಗರಿಕರಿಗೆ ಅನುಕೂಲವಾಗುವಂತೆ ಮತ್ತು ಕಾನೂನು ಬೆಂಬಲವನ್ನು ಒದಗಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಕಳೆದ ವರ್ಷ 87 ಬಿಲಿಯನ್ ಡಾಲರ್ಗಳನ್ನು ಅನಿವಾಸಿ ಭಾರತೀಯರು ಭಾರತಕ್ಕೆ ರವಾನೆ ಮಾಡಿದ್ದಾರೆ, ಹಿಂದಿನ ವರ್ಷದಲ್ಲಿ ಈ ಮೊತ್ತ 83 ಬಿಲಿಯನ್ ಡಾಲರ್ ಆಗಿತ್ತು. ಕಾನೂನು ಪ್ರಕ್ರಿಯೆಗಳ ಮೂಲಕ ವಲಸೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಮತ್ತು ಆ ವಲಸಿಗರ ತರಬೇತಿ ಮಟ್ಟವನ್ನು ಹೆಚ್ಚಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಡಾ. ಸಯೀದ್ ಹೇಳಿದರು. ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಏಜೆಂಟ್ಗಳನ್ನು ಹತ್ತಿಕ್ಕಲಾಗುವುದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.