ನವದೆಹಲಿ: ಸೆಪ್ಟಂಬರ್ 1ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.
ಸೆ.1ರಂದು ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಯೋಗಿ ಆಗಮಿಸಲಿದ್ದಾರೆ. 11:55ಕ್ಕೆ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸ್ ಕ್ಯಾಂಪಸ್ಗೆ ಭೇಟಿ ನೀಡಲಿದ್ದಾರೆ. ಸುಮಾರು 15 ನಿಮಿಷ ಕ್ಯಾಂಪಸ್ ವೀಕ್ಷಿಸಲಿದ್ದು, ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮಧ್ಯಾಹ್ನ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸ್ ನ “ಕ್ಷೇಮವನ”ದ ಉದ್ಘಾಟನೆ ನೇರವೇರಿಸಲಿದ್ದಾರೆ. ಬಳಿಕ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಉತ್ತರ ಪ್ರದೇಶಕ್ಕೆ ವಾಪಸ್ ತೆರಳಲಿದ್ದಾರೆ ಎನ್ನಲಾಗಿದೆ.
Uttar Pradesh CM Yogi Adityanath will be on a one-day visit to Karnataka on 1st September for the inauguration ceremony of Kshemvana unit of SDM College Of Naturopathy And Yogic Sciences in Nelamangala.
(File photo) pic.twitter.com/oIdPCKjBjD
— ANI (@ANI) August 30, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.