ನವದೆಹಲಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಬುಧವಾರ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋಗೆ 2014ರ ಸಾಲಿನ ಗಾಂಧಿ ಶಾಂತಿ ಪುರಸ್ಕಾರವನ್ನು ಪ್ರದಾನ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
1995ರಿಂದ ಮಹಾತ್ಮ ಗಾಂಧಿಯವರ ಹೆಸರಿನಲ್ಲಿ ಕೇಂದ್ರ ಸರ್ಕಾರ ವಾರ್ಷಿಕ ಗಾಂಧಿ ಶಾಂತಿ ಪುರಸ್ಕಾರವನ್ನು ಪ್ರದಾನ ಮಾಡುತ್ತಿದೆ. ಅಹಿಂಸೆಯ ತತ್ವದಡಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಬದಲಾವಣೆಗಳನ್ನು ತಂದ ಸಂಸ್ಥೆ ಅಥವಾ ವ್ಯಕ್ತಿಗಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
2013ರಲ್ಲಿ ಗಾಂಧಿವಾದಿ ಮತ್ತು ಪರಿಸರವಾದಿಯಾಗಿದ್ದ ಚಂಡಿ ಪ್ರಸಾದ್ ಭಟ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.