ಅಬುಧಾಬಿ: ನಿರ್ಮಾಣ ಹಂತದಲ್ಲಿರುವ ಅಬುಧಾಬಿಯ ಮೊದಲ ಹಿಂದೂ ದೇವಾಲಯದ ಆವರಣಕ್ಕೆ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭೇಟಿ ನೀಡಿದರು. ಸುಮಾರು 55,000 ಚದರ ಮೀಟರ್ ಜಾಗದಲ್ಲಿ ದೇವಾಲಯ ನಿರ್ಮಾಣವಾಗಲಿದೆ.
ಈ ದೇಗುಲ “ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ” ಎಂದು ಜೈಶಂಕರ್ ಬಣ್ಣಿಸಿದ್ದಾರೆ.
ಮೂರು ದಿನಗಳ ಭೇಟಿಗಾಗಿ ಬುಧವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಆಗಮಿಸಿದ ಎಸ್ ಜೈಶಂಕರ್ ಅವರು ದೇವಾಲಯದ ನಿರ್ಮಾಣದಲ್ಲಿ ಭಾರತೀಯರ ಶ್ರಮವನ್ನು ಶ್ಲಾಘಿಸಿದರು.
“ಗಣೇಶ ಚತುರ್ಥಿಯಂದು, ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ BAPS ಹಿಂದೂ ದೇವಾಲಯಕ್ಕೆ ಭೇಟಿ ನೀಡಲು ಆಶೀರ್ವದಿತನಾಗಿದ್ದೇನೆ. ತ್ವರಿತ ಪ್ರಗತಿಯನ್ನು ನೋಡಲು ಸಂತೋಷವಾಗಿದೆ ಮತ್ತು ಎಲ್ಲರ ಆಳವಾದ ಭಕ್ತಿಗೆ ನಮನ. ಈ ಸೈಟ್ನಲ್ಲಿ BAPS ತಂಡ, ಸಮುದಾಯ ಬೆಂಬಲಿಗರು ಮತ್ತು ಭಕ್ತರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿದೆ” ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಅಲ್ಲಿ ಸಚಿವ ಶೇಖ್ ನಹ್ಯಾನ್ ಬಿನ್ ಮಬಾರಕ್ ಅಲ್ ನಹ್ಯಾನ್ ಅವರನ್ನು ಜೈಶಂಕರ್ ಭೇಟಿ ಮಾಡಿದರು ಮತ್ತು ಭಾರತೀಯ ಸಮುದಾಯ, ಯೋಗ ಚಟುವಟಿಕೆಗಳು, ಕ್ರಿಕೆಟ್ ಮತ್ತು ಸಾಂಸ್ಕೃತಿಕ ಸಹಕಾರಕ್ಕಾಗಿ ಅವರ ಬಲವಾದ ಬೆಂಬಲವನ್ನು ಶ್ಲಾಘಿಸಿದರು.
On Ganesh Chaturthi, blessed to visit the @BAPS Hindu temple under construction in Abu Dhabi.
Glad to see the rapid progress and deeply appreciate the devotion of all involved. Met the BAPS team, community supporters and devotees and workers at the site. pic.twitter.com/7ZezrfvkuR
— Dr. S. Jaishankar (@DrSJaishankar) August 31, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.