ಲಕ್ನೋ: ಉತ್ತರ ಪ್ರದೇಶ ಸರ್ಕಾರವು ತನ್ನ ರಾಜ್ಯದಲ್ಲಿ ಇರುವ ಮಾನ್ಯತೆ ಪಡೆಯದ ಮದರಸಾಗಳ ಬಗ್ಗೆ ಸಮೀಕ್ಷೆಯನ್ನು ನಡೆಸಲು ಮುಂದಾಗಿದೆ.
ಈ ಬಗ್ಗೆ ಸರ್ಕಾರ ಘೋಷಣೆ ಮಾಡಿದ್ದು, ಸಮೀಕ್ಷೆಯ ಮೂಲಕ ಅಲ್ಲಿ ಲಭ್ಯವಿರುವ ಶಿಕ್ಷಕರ ಸಂಖ್ಯೆ, ಪಠ್ಯಕ್ರಮ ಮತ್ತು ಮೂಲ ಸೌಕರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ನಿರ್ಧರಿಸಲಾಗಿದೆ ಎಂದಿದೆ.
ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳ ಲಭ್ಯತೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಗತ್ಯಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಸಮೀಕ್ಷೆ ನಡೆಸಲಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಬುಧವಾರ ಹೇಳಿದ್ದಾರೆ.
ಸದ್ಯದಲ್ಲೇ ಸಮೀಕ್ಷೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಮೀಕ್ಷೆಯ ಸಮಯದಲ್ಲಿ, ಮದರಸಾದ ಹೆಸರು ಮತ್ತು ಅದನ್ನು ನಿರ್ವಹಿಸುತ್ತಿರುವ ಸಂಸ್ಥೆ, ಅದು ಖಾಸಗಿ ಅಥವಾ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆಯೇ, ಅಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಕುಡಿಯುವ ನೀರು, ಪೀಠೋಪಕರಣಗಳು, ವಿದ್ಯುತ್ ಸರಬರಾಜು ಮತ್ತು ಶೌಚಾಲಯದ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು ಎಂದು ಅನ್ಸಾರಿ ಹೇಳಿದ್ದಾರೆ.
ಪ್ರಸ್ತುತ ಉತ್ತರ ಪ್ರದೇಶದಲ್ಲಿ ಒಟ್ಟು 16,461 ಮದರಸಾಗಳಿದ್ದು, ಈ ಪೈಕಿ 560ಕ್ಕೆ ಸರ್ಕಾರದ ಅನುದಾನ ನೀಡಿರುವುದು ಗಮನಾರ್ಹ. ರಾಜ್ಯದಲ್ಲಿ ಕಳೆದ ಆರು ವರ್ಷಗಳಿಂದ ಹೊಸ ಮದರಸಾಗಳು ಅನುದಾನದ ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.