ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸೆಪ್ಟೆಂಬರ್ 5 ರಿಂದ ನಾಲ್ಕು ದಿನಗಳ ಕಾಲ ಭಾರತ ಪ್ರವಾಸದಲ್ಲಿ ಇರಲಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿದಮ್ ಬಾಗ್ಚಿ, ಬಾಂಗ್ಲಾದೇಶದ ಪ್ರಧಾನಿಯು ಭಾರತ ಭೇಟಿಯ ಸಮಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಲಿದ್ದಾರೆ.
ಹಸೀನಾ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ ನಡೆಸಲಿದ್ದಾರೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೂ ಹಸೀನಾ ಮಾತುಕತೆ ನಡೆಸಲಿದ್ದಾರೆ.
ಹಸೀನಾ ಅವರು ಅಜ್ಮೀರ್ ದರ್ಗಾಕ್ಕೂ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿನ ವರ್ಷಗಳಲ್ಲಿ ಎರಡೂ ದೇಶಗಳು ಅತ್ಯುನ್ನತ ಮಟ್ಟದಲ್ಲಿ ಹೆಚ್ಚಿನ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಭೇಟಿಯು ಬಲವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳು, ಪರಸ್ಪರ ನಂಬಿಕೆ ಮತ್ತು ತಿಳುವಳಿಕೆಯ ಆಧಾರದ ಮೇಲೆ ಉಭಯ ದೇಶಗಳ ನಡುವಿನ ಬಹುಮುಖಿ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ವಿದೇಶಾಂಗ ವಕ್ತಾರರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.