ನವದೆಹಲಿ: ವೋಟ್ ಬ್ಯಾಂಕ್ ರಾಜಕೀಯದಿಂದಾಗಿ ಇಸ್ರೇಲ್ ಜೊತೆಗಿನ ಬಾಂಧವ್ಯ ವೃದ್ಧಿಯಿಂದ ಭಾರತ ಹಿಂದೆ ದೂರ ಉಳಿದಿತ್ತು ಎಂದು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಲ್ಲಿ ವಿಕಸನಗೊಂಡ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಅವರು, ಮೋದಿ ರಾಷ್ಟ್ರೀಯ ಹಿತಾಸಕ್ತಿಗಳನ್ನು ಸದಾ ಮೇಲ್ಮಟ್ಟದಲ್ಲಿ ಇಡುತ್ತಾರೆ ಎಂದು ಹೇಳಿದರು.
ಗುಜರಾತ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜೈಶಂಕರ್ ಈ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ.
ಭಾರತವು ಇಸ್ರೇಲ್ನಿಂದ ದೊಡ್ಡ ಪ್ರಯೋಜನಗಳನ್ನು ಹೊಂದಿದ್ದರೂ ಸಹ ‘ಕೆಲವು ರಾಜಕೀಯ ಕಾರಣಗಳಿಂದಾಗಿ’ ಸಂಬಂಧವನ್ನು ಹೆಚ್ಚಿಸುವುದರಿಂದ ದೂರ ಉಳಿಯಲಾಗಿತ್ತು ಎಂದಿದ್ದಾರೆ.
ಹಿಂದಿನ ಸರ್ಕಾರಗಳನ್ನು ಗುರಿಯಾಗಿಸಿ ಮಾತನಾಡಿದ ಅವರು, ವೋಟ್ ಬ್ಯಾಂಕ್ ರಾಜಕೀಯದ ಕಾರಣದಿಂದ ಉತ್ತಮ ಸಂಬಂಧಗಳನ್ನು ನಿರ್ಮಿಸಿಕೊಳ್ಳುವುದನ್ನು ನಿರ್ಲಕ್ಷ ಮಾಡಲಾಗಿತ್ತು ಆದರೆ ಈಗ ಸಮಯ ಕಳೆದು ಹೋಗಿದೆ ಎಂದಿದ್ದಾರೆ.
ಇಸ್ರೇಲ್ಗೆ ಮೊದಲು ಭೇಟಿ ನೀಡಿದವರು ಪ್ರಧಾನಿ ಮೋದಿ ಮತ್ತು ಅವರ ಅಧಿಕಾರಾವಧಿಯಲ್ಲಿ ವಿದೇಶಾಂಗ ನೀತಿಗಳು ಮಹತ್ತರವಾಗಿ ಬೆಳೆದವು ಎಂದು ಅವರು ಒತ್ತಿ ಹೇಳಿದರು.
2017ರಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿ ಇಸ್ರೇಲ್ಗೆ ಭೇಟಿ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.