ನವದೆಹಲಿ: ವಿಜ್ಞಾನ, ಸಾಹಿತ್ಯ ಮತ್ತು ಸಮಾಜ ವಿಜ್ಞಾನಗಳಲ್ಲಿ ಪ್ರತಿಭೆಯನ್ನು ಬೆಳೆಸಲು ಮಾತೃಭಾಷೆಯಲ್ಲಿ ಕಲಿಸಿದರೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ಶಾಲಾ ಶಿಕ್ಷಕರ ಕೊಡುಗೆಯನ್ನು ಸ್ಮರಿಸಿದ್ದಾರೆ. ಅವರಿಂದಾಗಿ ನಾನು ನಮ್ಮ ಹಳ್ಳಿಯಲ್ಲಿ ಕಾಲೇಜಿಗೆ ಹೋದ ಮೊದಲ ಹುಡುಗಿಯಾದೆ ಎಂದಿದ್ದಾರೆ.
ಭಾರತದ ಶಾಲಾ ಶಿಕ್ಷಣವು ವಿಶ್ವದ ಅತಿದೊಡ್ಡ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದಾಗಿದೆ ಎಂದು ಮುರ್ಮು ಹೇಳಿದರು.
ಶಾಲಾ ಶಿಕ್ಷಣಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಗೌರವಿಸಲು ಅವರು 46 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ 2022 ಅನ್ನು ಪ್ರದಾನ ಮಾಡಿದರು.
ಕಠಿಣ ಪಾರದರ್ಶಕ ಮತ್ತು ಆನ್ಲೈನ್ ಮೂರು ಹಂತದ ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ದೇಶದ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿಗಳನ್ನು ನೀಡಲು ಶಿಕ್ಷಣ ಸಚಿವಾಲಯ ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನದಂದು ವಿಜ್ಞಾನ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತದೆ.
ಪ್ರಶಸ್ತಿ ಪಡೆದ ಶಿಕ್ಷಕರಲ್ಲಿ ತಲಾ ಮೂವರು ಹಿಮಾಚಲ ಪ್ರದೇಶ, ಪಂಜಾಬ್, ಮಹಾರಾಷ್ಟ್ರ ಮತ್ತು ತೆಲಂಗಾಣದಿಂದ ಬಂದಿದ್ದಾರೆ. ಕರ್ನಾಟಕದ ಜಿ ಪೊನ್ಸಂಕರಿ, ಉಮೇಶ್ ಟಿಪಿ ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಹರಿಯಾಣದ ಶಿಕ್ಷಕರು ಕೂಡ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
LIVE: President Droupadi Murmu’s address at the presentation of National Awards to teachers on the occasion of Teachers’ Day in New Delhi https://t.co/sea7ZEk5Fj
— President of India (@rashtrapatibhvn) September 5, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.