ನವದೆಹಲಿ: ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಅವರು ಇಂದು ದೆಹಲಿಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿ ಮಾಡಿದರು.
ಹಸೀನಾ ಅವರು ನಾಲ್ಕು ದಿನಗಳ ಭಾರತ ಭೇಟಿಗಾಗಿ ಇಂದು ನವದೆಹಲಿ ತಲುಪಿದ್ದಾರೆ.
ಭೇಟಿಯ ವೇಳೆ ಅವರು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ ನಡೆಸಲಿದ್ದಾರೆ. ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಲಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿಯವರು ಕೊನೆಯ ಬಾರಿಗೆ ಅಕ್ಟೋಬರ್ 2019 ರಲ್ಲಿ ನವದೆಹಲಿಗೆ ಭೇಟಿ ನೀಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಎರಡೂ ಕಡೆಯವರು ಉನ್ನತ ಮಟ್ಟದ ಸಹಭಾಗಿತ್ವದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಬಾಂಗ್ಲಾದೇಶವು ಭಾರತದ ನೆರೆಹೊರೆಯ ಮೊದಲ ನೀತಿಯ ಅಡಿಯಲ್ಲಿ ಪ್ರಮುಖ ಪಾಲುದಾರ. ಉಭಯ ದೇಶಗಳ ದ್ವಿಪಕ್ಷೀಯ ಸಹಕಾರವು ಭದ್ರತೆ, ವ್ಯಾಪಾರ ಮತ್ತು ವಾಣಿಜ್ಯ, ವಿದ್ಯುತ್ ಮತ್ತು ಇಂಧನ, ಸಾರಿಗೆ ಮತ್ತು ಸಂಪರ್ಕ, ರಕ್ಷಣೆ, ನದಿಗಳು ಮತ್ತು ಕಡಲ ವ್ಯವಹಾರಗಳು ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೆ ವಿಸ್ತರಿಸಿದೆ.
Delighted to call on Prime Minister Sheikh Hasina of Bangladesh this evening.
The warmth and frequency of our leadership level contacts is a testimony to our close neighborly partnership. pic.twitter.com/bJpheOAyzp
— Dr. S. Jaishankar (@DrSJaishankar) September 5, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.