ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ದಕ್ಷಿಣ ಕಾಶ್ಮೀರದ ಪುಷ್ಕರಿ ಕನಿಲ್ವಾನ್ ಗ್ರಾಮದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಹಿಜ್ಬುಲ್ ಭಯೋತ್ಪಾದಕರನ್ನು ಕೊಲ್ಲಲಾಯಿತು ಎಂದು ಭದ್ರತಾ ಮೂಲಗಳು ತಿಳಿಸಿವೆ.
ಅನಂತನಾಗ್ ಜಿಲ್ಲೆಯ ಪುಷ್ಕರಿ ಕನಿಲ್ವಾನ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳುಶೋಧ ಕಾರ್ಯಾಚರಣೆ ನಡೆಸಿದ್ದವು. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆ ಎನ್ಕೌಂಟರ್ಗೆ ತಿರುಗಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ, ಇವರಿಬ್ಬರು ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ನೊಂದಿಗೆ ಸಂಬಂಧ ಹೊಂದಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಕೊಲ್ಲಲ್ಪಟ್ಟ ಭಯೋತ್ಪಾದಕರನ್ನು ಡ್ಯಾನಿಶ್ ಭಟ್ ತ್ತು ಬಶರತ್ ನಬಿ ಎಂದು ಗುರುತಿಸಲಾಗಿದೆ.
Encounter underway at the Poshkreeri area of Anantnag. Two terrorists killed. Police and security forces are on the job: Jammu and Kashmir Police
(Visuals deferred by unspecified time) pic.twitter.com/UxWDXPOdlj
— ANI (@ANI) September 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.