ಬೆಂಗಳೂರು: ಕಳೆದ ಒಂದು ವಾರಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾದ ಕಾರಣ ಪ್ರವಾಹದಂತ ಪರಿಸ್ಥಿತಿ ನಿರ್ಮಾಣವಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಅನೇಕ ಕಡೆ ಸಾವು ನೋವುಗಳು ಸಂಭವಿಸಿದ ಬಗ್ಗೆಯೂ ವರದಿಯಾಗಿದೆ.
ಈ ನಡುವೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಮಳೆ ಹಾನಿ ಅಧ್ಯಯನ ತಂಡದೊಂದಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದ್ದಾರೆ.
ಜುಲೈ ಮತ್ತು ಆಗಸ್ಟ್ನಲ್ಲಿ ಸಂಭವಿಸಿದ ಮಳೆ ಹಾನಿಗೆ ಸಂಬಂಧಿಸಿದಂತೆ ಈ ತಂಡ ಅಧ್ಯಯನ ನಡೆಸುತ್ತಿದೆ.
“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಸಂಭವಿಸಿದ ಮಳೆಹಾನಿ ಅಧ್ಯಯನಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದರು. ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಬಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದರು” ಎಂದು ಮುಖ್ಯಮಂತ್ರಿಗಳ ʼಕೂʼ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.