ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಗ್ರೇಟರ್ ನೋಯ್ಡಾದಲ್ಲಿ ‘ಐಡಿಎಫ್ ವಿಶ್ವ ಡೈರಿ ಶೃಂಗಸಭೆ 2022’ ಅನ್ನು ಉದ್ಘಾಟಿಸಲಿದ್ದು, ಇದರಲ್ಲಿ 50 ದೇಶಗಳಿಂದ 1,500 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಶೋತ್ತಮ್ ರೂಪಾಲಾ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಸೆಪ್ಟೆಂಬರ್ 12 ರಿಂದ ಪ್ರಾರಂಭವಾಗುವ 4 ದಿನಗಳ ಶೃಂಗಸಭೆಯ ಥೀಮ್ ‘ಪೌಷ್ಠಿಕಾಂಶ ಮತ್ತು ಜೀವನೋಪಾಯಕ್ಕಾಗಿ ಡೈರಿ’ ಎಂಬುದಾಗಿದೆ.
”ಪ್ರಧಾನಿ ಅವರು ಸೆಪ್ಟೆಂಬರ್ 12 ರಂದು ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ. ನಾಲ್ಕು ದಿನಗಳ ಕಾರ್ಯಕ್ರಮದಲ್ಲಿ ಸುಮಾರು 50 ದೇಶಗಳ 1500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ” ಎಂದು ಸಚಿವರು ತಿಳಿಸಿದ್ದಾರೆ.
ಪ್ರಧಾನಿಯಲ್ಲದೆ, ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಕೂಡ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರೂಪಾಲಾ ಹೇಳಿದ್ದಾರೆ.
48 ವರ್ಷಗಳ ನಂತರ ಭಾರತದಲ್ಲಿ ನಡೆಯುತ್ತಿರುವ ಈ ಜಾಗತಿಕ ಡೈರಿ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ, ಕರ್ನಾಟಕ ಮತ್ತು ಗುಜರಾತ್ ಮುಖ್ಯಮಂತ್ರಿಗಳು ಸಹ ಭಾಗಿಯಾಗಲಿದ್ದಾರೆ. ಕೊನೆಯ ಬಾರಿ ಭಾರತವು 1974 ರಲ್ಲಿ ಅಂತರರಾಷ್ಟ್ರೀಯ ಡೈರಿ ಕಾಂಗ್ರೆಸ್ ಅನ್ನು ಆಯೋಜಿಸಿತ್ತು.
ಡೈರಿ ಶೃಂಗಸಭೆಯು ಜಾಗತಿಕ ಮತ್ತು ಭಾರತೀಯ ಡೈರಿ ಉದ್ಯಮದ ನಾಯಕರು, ತಜ್ಞರು, ರೈತರು ಮತ್ತು ನೀತಿ ಯೋಜಕರ ಸಭೆಯಾಗಿದೆ.
”ಹಾಲು ಉತ್ಪಾದನೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದು, ಜಾಗತಿಕ ಉತ್ಪಾದನೆಯಲ್ಲಿ ಶೇ.23ರಷ್ಟು ಪಾಲು ಹೊಂದಿದೆ. ವಿದೇಶಿ ಪ್ರತಿನಿಧಿಗಳು ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾರೆ ಮತ್ತು ಡೈರಿ ವಲಯದಲ್ಲಿನ ಇತ್ತೀಚಿನ ತಂತ್ರಜ್ಞಾನಗಳ ಬಗ್ಗೆ ಮಾತನಾಡುತ್ತಾರೆ. ನಮ್ಮ ಅನುಭವದ ಬಗ್ಗೆ ನಾವು ಅವರಿಗೆ ಹೇಳುತ್ತೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.