ಲಂಡನ್: ಬ್ರಿಟನ್ ರಾಣಿ ಎಲಿಜಬೆತ್-II ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಬ್ರಿಟನ್ನ ಬಲ್ಮೋರಾಲ್ನಲ್ಲಿ ಸೂಕ್ತ ವೈದ್ಯಕೀಯ ನಿಗಾದಡಿ ಇಡಲಾಗಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣದಿಂದ ಅವರು ಈ ವಾರದ ಆರಂಭದಲ್ಲಿ ಸ್ಕಾಟ್ಲೆಂಡ್ನಲ್ಲಿ ಹೊಸ ಪ್ರಧಾನಿ ಲಿಜ್ ಟ್ರಸ್ ಅವರ ನೇಮಕ ಸೇರಿದಂತೆ ತಮ್ಮ ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದರು.
ಎಲಿಜಬೆತ್-II ಅವರು 1953 ರಿಂದ ಬ್ರಿಟನ್ ರಾಣಿಯಾಗಿ ಸುದೀರ್ಘ ಏಳು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಎಲಿಜಬೆತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಜಗತ್ತಿನಾದ್ಯಂತದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
“ರಾಣಿ ಎಲಿಜಬೆತ್ II ನಮ್ಮ ಕಾಲದ ಧೀಮಂತ ನಾಯಕಿಯಾಗಿ ನೆನಪಿಸಿಕೊಳ್ಳುತ್ತಾರೆ. ಅವರು ತಮ್ಮ ರಾಷ್ಟ್ರ ಮತ್ತು ಜನರಿಗೆ ಸ್ಪೂರ್ತಿದಾಯಕ ನಾಯಕತ್ವವನ್ನು ನೀಡಿದರು. ಅವರು ಸಾರ್ವಜನಿಕ ಜೀವನದಲ್ಲಿ ಘನತೆ ಮತ್ತು ಸಭ್ಯತೆಯನ್ನು ನಿರೂಪಿಸಿದರು. ಆಕೆಯ ನಿಧನದಿಂದ ನೋವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಯುಕೆ ಜನರೊಂದಿಗೆ ಇದೆ” ಎಂದು ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ.
“2015 ಮತ್ತು 2018 ರಲ್ಲಿ ನನ್ನ ಯುಕೆ ಭೇಟಿಗಳ ಸಮಯದಲ್ಲಿ ನಾನು ಕ್ವೀನ್ ಎಲಿಜಬೆತ್ II ಅವರೊಂದಿಗೆ ಸ್ಮರಣೀಯ ಸಭೆಗಳನ್ನು ನಡೆಸಿದ್ದೇನೆ. ನಾನು ಅವರ ಪ್ರೀತಿ ಮತ್ತು ಕಾಳಜಿಯನ್ನು ಎಂದಿಗೂ ಮರೆಯುವುದಿಲ್ಲ. ಸಭೆಯೊಂದರಲ್ಲಿ ಅವರು ಮಹಾತ್ಮ ಗಾಂಧಿಯವರು ತಮ್ಮ ಮದುವೆಗೆ ಉಡುಗೊರೆಯಾಗಿ ನೀಡಿದ ಕರವಸ್ತ್ರವನ್ನು ನನಗೆ ತೋರಿಸಿದರು. ನಾನು ಯಾವಾಗಲೂ ಆ ಸೂಚಕವನ್ನು ಗೌರವಿಸುತ್ತೇನೆ” ಎಂದು ಮತ್ತೊಂದು ಟ್ವಿಟ್ನಲ್ಲಿ ಮೋದಿ ಹೇಳಿದ್ದಾರೆ.
I had memorable meetings with Her Majesty Queen Elizabeth II during my UK visits in 2015 and 2018. I will never forget her warmth and kindness. During one of the meetings she showed me the handkerchief Mahatma Gandhi gifted her on her wedding. I will always cherish that gesture. pic.twitter.com/3aACbxhLgC
— Narendra Modi (@narendramodi) September 8, 2022
Her Majesty Queen Elizabeth II will be remembered as a stalwart of our times. She provided inspiring leadership to her nation and people. She personified dignity and decency in public life. Pained by her demise. My thoughts are with her family and people of UK in this sad hour.
— Narendra Modi (@narendramodi) September 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.