ನವದೆಹಲಿ: ರೌಡಿ ಗ್ಯಾಂಗ್ಗಳು, ಅಪರಾಧ ಸಿಂಡಿಕೇಟ್ಗಳನ್ನು ಹತ್ತಿಕ್ಕಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದೇಶಾದ್ಯಂತ 60 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಗ್ಯಾಂಗ್ಗಳು ಮತ್ತು ಅಪರಾಧ ಸಿಂಡಿಕೇಟ್ಗಳನ್ನು ಹತ್ತಿಕ್ಕಲು ಇಂದು ದೇಶಾದ್ಯಂತ 60 ಸ್ಥಳಗಳಲ್ಲಿ ದಾಳಿ ನಡೆದಿದ್ದು, ಇದರಲ್ಲಿ ದೆಹಲಿ, ರಾಷ್ಟ್ರೀಯ ರಾಜಧಾನಿ ಪ್ರದೇಶ, ಹರಿಯಾಣ, ಉತ್ತರ ಪ್ರದೇಶ ಮತ್ತು ಪಂಜಾಬ್ನ ಸ್ಥಳಗಳು ಸೇರಿವೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಬಾಂಬಿಹಾ ಗ್ಯಾಂಗ್ ಮತ್ತು ನೀರಜ್ ಬವಾನಾ ಗ್ಯಾಂಗ್ಗೆ ಸೇರಿದ 10 ದರೋಡೆಕೋರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕ ಎರಡು ಎಫ್ಐಆರ್ಗಳನ್ನು ದಾಖಲಿಸಿದ ನಂತರ ಎನ್ಐಎ ತನಿಖೆ ನಡೆಸುತ್ತಿದೆ.
ಭಯೋತ್ಪಾದಕ ಗುಂಪುಗಳು ಮತ್ತು ಸಿಧು ಮೂಸ್ ವಾಲಾ ಹತ್ಯೆ ಪ್ರಕರಣದಲ್ಲಿ ಬಂಧಿತ ದರೋಡೆಕೋರರ ನಡುವೆ ಬಲವಾದ ಸಂಬಂಧವಿದೆ ಎಂದು ಪಂಜಾಬ್ ಡಿಜಿಪಿ ಗೌರವ್ ಯಾದವ್ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಪಾಕಿಸ್ಥಾನದ ನಟೋರಿಯಸ್ ಗುಪ್ತಚರ ಇಲಾಖೆ ಐಎಸ್ಐ ಅಪರಾಧಿಗಳ ಗ್ಯಾಂಗ್ಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಯಾದವ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.