ಬೆಂಗಳೂರು: ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಬೆಂಗಳೂರಿನಲ್ಲಿ ಚುರುಕುಗೊಂಡಿದೆ. ಈ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಲಾಗಿದೆ. ಕೆಲವರು ರಾಜಕಾಲುವೆಯನ್ನು ಮುಚ್ಚಿದ್ದಾರೆ. ಈ ಮೂಲಕ ಕಾಲುವೆ ನೀರು ಹರಿಯದಂತೆ ಮಾಡಿದ್ದಾರೆ. ಅಂತಹ ಒತ್ತುವರಿಗಳನ್ನು ತೆರವು ಮಾಡಲಾಗುವುದು ಎಂದು ಹೇಳಿದ್ದಾರೆ.
“ಮಳೆ ನೀರು ಚರಂಡಿಗೆ ಅಡ್ಡಿಯಾಗಿದ್ದರೆ, ಅವುಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಪ್ರವಾಹ ಬಂದಾಗ ಐಟಿ ಬಿಟಿಯವರು ಸೇರಿದಂತೆ ಎಲ್ಲರಿಗೂ ತೊಂದರೆಯಾಗಿದೆ. ಜನಸಾಮಾನ್ಯರಿಗೆ, ಕೆಳಹಂತದ ಮನೆಗಳಿಗೂ ತೊಂದರೆಯಾಗಿದೆ. ಇವುಗಳನ್ನು ತೆರೆವುಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಲಾಗುವುದು” ಎಂದು ತಿಳಿಸಿದರು.
ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿದ್ದು, ಇದರ ಬಗ್ಗೆ ನಿರ್ದೇಶನ ಪಡೆಯಲಾಗಿದೆ. ನ್ಯಾಯಾಲಯವೂ ಪ್ರವಾಹದ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಿದೆ. ಈ ಬಾರಿ ದೊಡ್ಡ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರವುಗೊಳಿಸಲಾಗುವುದು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.