ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3484 ಜಿಲ್ಲಾ ಶಸ್ತ್ರ ಮೀಸಲು ಪೊಲೀಸ್ ಪೇದೆ (ಡಿಆರ್) ಹಾಗೂ ನಗರ ಸಶಸ್ತ್ರ ಮೀಸಲು ಪೊಲೀಸ್ ಹುದ್ದೆ (ಸಿಎಆರ್) ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ತೃತೀಯಲಿಂಗಿಗಳಿಗೂ ಕೂಡ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಈ ಬಗ್ಗೆ ಸರ್ಕಾರ ಸೋಮವಾರ ಗೆಜೆಟ್ ನೋಟಿಫಿಕೇಶನ್ ಅನ್ನು ಹೊರಡಿಸಿದ್ದು, ಶೀಘ್ರದಲ್ಲೇ ವೆಬ್ಸೈಟ್ನಲ್ಲಿ ಪೊಲೀಸ್ ಇಲಾಖೆ ನೋಟಿಫಿಕೇಶನ್ ಅನ್ನು ಪ್ರಕಟ ಮಾಡಲಿದೆ.
Ksp-recruitment.in ವೆಬ್ಸೈಟ್ ಮೂಲಕ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 31ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ಕಮಿಷನರೇಟ್ ವ್ಯಾಪ್ತಿಯಲ್ಲಿ 2996 ಸಾಮಾನ್ಯ ಪುರುಷ ಸಶಸ್ತ್ರ ಮೀಸಲು ಪೊಲೀಸ್ ಪೇದೆ ಹಾಗೂ ನಗರ ಸಶಸ್ತ್ರ ಪೊಲೀಸ್ ಹುದ್ದೆಗಳಿವೆ. ಇದರೊಂದಿಗೆ ತೃತೀಯ ಲಿಂಗಿಗಳಿಗೂ ಹೆಚ್ಚುವರಿಯಾಗಿ 68 ಹುದ್ದೆಗಳನ್ನು ನೀಡಲಾಗಿದೆ.
10ನೇ ತರಗತಿ ಅಥವಾ ತತ್ಸಮಾನ ಕನಿಷ್ಠ ಶೈಕ್ಷಣಿಕ ವಿದ್ಯಾರ್ಥಿಯನ್ನು ಈ ಹುದ್ದೆಗಳಿಗೆ ನಿಗದಿಗೊಳಿಸಲಾಗಿದೆ. ಕನಿಷ್ಠ 18 ವರ್ಷ ವಯಸ್ಸು ಮೀರಿದವರು ಅರ್ಜಿ ಸಲ್ಲಿಸಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.