ನವದೆಹಲಿ: ಸೌದಿ ಅರೇಬಿಯಾದ ರಾಷ್ಟ್ರೀಯ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ ಮತ್ತು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದಾರೆ.
ಈ ನಡುವೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೌದಿ ಅರೇಬಿಯಾಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯನ್ನು ಮುಗಿಸಿದ್ದಾರೆ. ಅಲ್ಲಿಅವರು ಉನ್ನತ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ್ದಾರೆ. ರಾಜಕೀಯ, ವ್ಯಾಪಾರ, ಇಂಧನ, ರಕ್ಷಣೆ ಮತ್ತು ಭದ್ರತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸುವ ಕ್ರಮಗಳ ಕುರಿತು ಚರ್ಚಿಸಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಅವರು ಮೊನ್ನೆ ಭಾನುವಾರ ಜೆಡ್ಡಾದಲ್ಲಿ ಸೌದಿ ಕ್ರೌನ್ ಪ್ರಿನ್ಸ್ ಅವರನ್ನು ಭೇಟಿಯಾದರು ಮತ್ತು ಪ್ರಧಾನಿ ಮೋದಿಯವರ ಲಿಖಿತ ಸಂದೇಶವನ್ನು ಅವರು ಹಸ್ತಾಂತರಿಸಿದರು. ಅದರಲ್ಲಿ ಮುಂಬರುವ ಸೆಪ್ಟೆಂಬರ್ 23 ರಂದು ಸೌದಿ ಅರೇಬಿಯಾದ ರಾಷ್ಟ್ರೀಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಲಾಗಿತ್ತು ಮತ್ತು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಲಾಗಿತ್ತು.
ಕ್ರೌನ್ ಪ್ರಿನ್ಸ್ ಮೊಹಮ್ಮದ್ ಫೆಬ್ರವರಿ 2019 ರಲ್ಲಿ ಭಾರತಕ್ಕೆ ತಮ್ಮ ಮೊದಲ ಭೇಟಿ ನೀಡಿದ್ದರು.
ಸಭೆಯಲ್ಲಿ, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತು ಅವುಗಳನ್ನು ಹೆಚ್ಚಿಸುವ ಅವಕಾಶಗಳನ್ನು ಪರಿಶೀಲಿಸಲಾಯಿತು ಮತ್ತು ಇತ್ತೀಚಿನ ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ಬೆಳವಣಿಗೆಗಳು ಮತ್ತು ಅವುಗಳ ಕಡೆಗೆ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆ ಚರ್ಚಿಸಲಾಯಿತು ಎಂದು ಅಧಿಕೃತ ಸೌದಿ ಪ್ರೆಸ್ ಏಜೆನ್ಸಿ ವರದಿ ಮಾಡಿದೆ.
ಭಾನುವಾರದಂದು ರಿಯಾದ್ನಲ್ಲಿ, ಜೈಶಂಕರ್ ಅವರು ಸೌದಿ ಸಹವರ್ತಿ ರಾಜಕುಮಾರ ಫೈಸಲ್ ಬಿನ್ ಫರ್ಹಾನ್ ಅವರೊಂದಿಗೆ ಮಾತುಕತೆ ನಡೆಸಿದರು ಮತ್ತು ಪ್ರಸ್ತುತ ಜಾಗತಿಕ ರಾಜಕೀಯ ಮತ್ತು ಆರ್ಥಿಕ ವಿಷಯಗಳ ಕುರಿತು ಚರ್ಚಿಸಿದರು ಮತ್ತು ಜಿ-20 ಮತ್ತು ಬಹುಪಕ್ಷೀಯ ಸಂಸ್ಥೆಗಳಲ್ಲಿ ನಿಕಟವಾಗಿ ಕೆಲಸ ಮಾಡಲು ಒಪ್ಪಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.