
ಬೆಂಗಳೂರು: ಕನ್ನಡವನ್ನು ಕಾನೂನುಬದ್ಧವಾಗಿ ಕಡ್ಡಾಯ ಮಾಡಲು ಮತ್ತು ಭಾಷೆಯ ಬಳಕೆಯನ್ನು ಹೆಚ್ಚಿಸಲು ಹೊಸ ಕಾನೂನನ್ನು ಪರಿಚಯಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ವಿಧಾನಸಭೆಗೆ ತಿಳಿಸಿದರು.
ಹಿಂದಿ ದಿವಸ್ ವಿರುದ್ಧ ಜೆಡಿ(ಎಸ್) ನಡೆಸಿದ ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ ಬೊಮ್ಮಾಯಿ ಈ ಘೋಷಣೆ ಮಾಡಿದ್ದಾರೆ.
“ನಾವು ಕನ್ನಡ ಬಳಕೆಯನ್ನು ಹೆಚ್ಚಿಸಲು ಕಾನೂನನ್ನು ತರುತ್ತಿದ್ದೇವೆ. ಮೊದಲ ಬಾರಿಗೆ, ಕನ್ನಡವನ್ನು ಕಾನೂನುಬದ್ಧವಾಗಿ ಕಡ್ಡಾಯಗೊಳಿಸಲು ನಾವು ಕಾನೂನನ್ನು ತರುತ್ತೇವೆ” ಎಂದು ಬೊಮ್ಮಾಯಿ ಹೇಳಿದರು.
“ಇಲ್ಲಿಯವರೆಗೆ ನಾವು ಕನ್ನಡ ಕಡ್ಡಾಯದ ಬಗ್ಗೆ ಮಾತನಾಡುತ್ತಿದ್ದೆವು, ಹಲವಾರು ಸಮಿತಿಗಳು ಮತ್ತು ಪ್ರಾಧಿಕಾರಗಳು ಕನ್ನಡಕ್ಕೆ ಇದೆ. ಆದರೆ, ಅವುಗಳಿಗೆ ಕಾನೂನಿನ ಚೌಕಟ್ಟು ಇಲ್ಲ, ನಾವು ಕನ್ನಡ ಮತ್ತು ಕನ್ನಡಿಗರ ರಕ್ಷಣೆಗಾಗಿ ಕಾನೂನು ತರುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.
ಬೊಮ್ಮಾಯಿ ಅವರು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಉಲ್ಲೇಖಿಸಿ, ಕನ್ನಡಕ್ಕೆ ಪ್ರಾಧಾನ್ಯತೆ ನೀಡುವ ಪ್ರಯತ್ನಗಳಿಗೆ ಬಲ ತುಂಬುವ ಗುರಿಯನ್ನು ಇದು ಹೊಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) ಅಡಿಯಲ್ಲಿ, ಕರ್ನಾಟಕವು ಕನ್ನಡದಲ್ಲಿ ಎಂಜಿನಿಯರಿಂಗ್ ಕೋರ್ಸ್ ಅನ್ನು ನೀಡುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


