ನವದೆಹಲಿ: ಐದು ರಾಜ್ಯಗಳ ಬುಡಕಟ್ಟು ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ
ಛತ್ತೀಸ್ಗಢ, ಹಿಮಾಚಲ ಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಉತ್ತರ ಪ್ರದೇಶದ ಕೆಲವು ಜಾತಿಗಳನ್ನು ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿ ಸೇರಿಸಲು ಸಂಪುಟ ಅನುಮೋದಿಸಿದೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, ಈ ಜಾತಿಗಳ ಬಹುಕಾಲದ ಬೇಡಿಕೆಯನ್ನು ಈಡೇರಿಸಲಾಗಿದೆ. ಈ ಕ್ರಮವು ಅವರಿಗೆ ಕಲ್ಯಾಣ ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.
ಉತ್ತರಪ್ರದೇಶದ 13 ಜಿಲ್ಲೆಗಳಲ್ಲಿ ಇರುವ ಗೊಂಡರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಗೊಂಡರ ಐದು ಉಪಜಾತಿ ದುರಿಯ, ನಾಯಕ್, ಓಜಾ, ಪುಠಾರಿ, ರಾಜ್ಗೋಂಡ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾಗಿದೆ.
ಹಿಮಾಚಲ ಪ್ರದೇಶ ಹಟ್ಟಿ ಸಮುದಾಯ ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆಯಾಗಿದೆ.
ಛತ್ತೀಸ್ಗಢದ 12 ಬುಡಕಟ್ಟು ಜಾತಿಗಳ ಪೈಕಿ ಹನ್ನೊಂದನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲಾಗಿದೆ.
ಕರ್ನಾಟಕದ ಕಾಡು ಕುರುಬರರಿಗೆ ಸಮಾನವಾಗಿ ಬೆಟ್ಟ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.