ಒಟ್ಟಾವಾ: ಕೆನಡಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ (ಬಿಎಪಿಎಸ್) ದೇವಸ್ಥಾನದ ಗೋಡೆಗಳ ಮೇಲೆ ಮಂಗಳವಾರ ಅಪರಿಚಿತ ದುಷ್ಕರ್ಮಿಗಳು ಭಾರತ ವಿರೋಧಿ ಘೋಷಣೆಗಳನ್ನು ಬರೆದಿದ್ದಾರೆ.
ಕೆನಡಾದಲ್ಲಿರುವ ಭಾರತೀಯ ಹೈಕಮಿಷನ್ ಈ ಘಟನೆಯನ್ನು ಖಂಡಿಸಿದ್ದು, ಕೆನಡಾದ ಅಧಿಕಾರಿಗಳಿಗೆ ತನಿಖೆ ಮಾಡಲು ಮತ್ತು ಅಪರಾಧಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
“ಭಾರತ ವಿರೋಧಿ ಬರಹದ ಮೂಲಕ BAPS ಸ್ವಾಮಿನಾರಾಯಣ ಮಂದಿರ ಟೊರೊಂಟೊವನ್ನು ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಘಟನೆಯ ಬಗ್ಗೆ ತನಿಖೆ ನಡೆಸಲು ಮತ್ತು ಅಪರಾಧಿಗಳ ಮೇಲೆ ತ್ವರಿತ ಕ್ರಮ ಕೈಗೊಳ್ಳಲು ಕೆನಡಾದ ಅಧಿಕಾರಿಗಳಿಗೆ ವಿನಂತಿಸಿದ್ದೇವೆ” ಎಂದು ಕೆನಡಾದಲ್ಲಿನ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ.
ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ದೇವಸ್ಥಾನದ ಗೋಡೆಗಳ ಮೇಲೆ ಖಲಿಸ್ತಾನಿ ಘೋಷಣೆಗಳನ್ನು ಬರೆದಿರುವುದು ಕಂಡುಬಂದಿದೆ. ಘಟನೆಯ ಬಗ್ಗೆ ಬ್ರಾಂಪ್ಟನ್ ಮೇಯರ್ ಪ್ಯಾಟ್ರಿಕ್ ಬ್ರೌನ್ ಬೇಸರ ವ್ಯಕ್ತಪಡಿಸಿದ್ದಾರೆ.
“ಟೊರೊಂಟೊದ BAPS ಸ್ವಾಮಿನಾರಾಯಣ ಮಂದಿರದಲ್ಲಿ ಸಂಭವಿಸಿದ ವಿಧ್ವಂಸಕ ಕೃತ್ಯವನ್ನು ಕೇಳಿ ತುಂಬಾ ಬೇಸರವಾಗಿದೆ. ಈ ರೀತಿಯ ದ್ವೇಷಕ್ಕೆ ಕೆನಡಾದಲ್ಲಿ ಸ್ಥಾನವಿಲ್ಲ. ಆ ಅಪರಾಧಿಗಳನ್ನು ಹೊಣೆಗಾರರನ್ನಾಗಿ ತ್ವರಿತವಾಗಿ ನ್ಯಾಯಾಂಗಕ್ಕೆ ತರಲಾಗುತ್ತದೆ ಎಂಬ ಆಶಯವಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಭಾರತೀಯ ಮೂಲದ ಕೆನಡಾದ ಸಂಸತ್ ಸದಸ್ಯ ಚಂದ್ರ ಆರ್ಯ ಅವರು ಈ ಘಟನೆಯು ಕೇವಲ ಒಂದು ಸಣ್ಣ ಘಟನೆಯಲ್ಲ, ಇತ್ತೀಚಿನ ದಿನಗಳಲ್ಲಿ ಇಂತಹ ಘಟನೆಗಳ ಮೂಲಕ ಹಿಂದೂ ದೇವಾಲಯಗಳನ್ನು ಗುರಿಯಾಗಿಸಲಾಗಿದೆ.
“ಕೆನಡಾದ ಖಲಿಸ್ತಾನಿ ಉಗ್ರಗಾಮಿಗಳಿಂದ ಟೊರೊಂಟೊ BAPS ಶ್ರೀ ಸ್ವಾಮಿನಾರಾಯಣ ಮಂದಿರದ ವಿರೋಪ ಘಟನೆಯನ್ನು ಎಲ್ಲರೂ ಖಂಡಿಸಬೇಕು. ಇದು ಕೇವಲ ಒಂದು ಪ್ರತ್ಯೇಕ ಘಟನೆಯಲ್ಲ. ಕೆನಡಾದ ಹಿಂದೂ ದೇವಾಲಯಗಳು ಇತ್ತೀಚಿನ ದಿನಗಳಲ್ಲಿ ಈ ರೀತಿಯ ದ್ವೇಷದ ಅಪರಾಧಗಳಿಗೆ ಗುರಿಯಾಗುತ್ತಿವೆ. ಹಿಂದೂ ಕೆನಡಿಯನ್ನರು ಈ ಬಗ್ಗೆ ಕಳವಳ ಹೊಂದಿದ್ದಾರೆ,” ಆರ್ಯ ಟ್ವೀಟ್ ಮಾಡಿದ್ದಾರೆ.
We strongly condemn defacing of BAPS Swaminarayan Mandir Toronto with anti-India graffiti. Have requested Canadian authorities to investigate the incident and take prompt action on perpetrators. @MEAIndia @IndiainToronto @PIB_India @DDNewslive @CanadainIndia @cgivancouver
— India in Canada (@HCI_Ottawa) September 15, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.