ಕಲಬುರಗಿ: ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಡೆಯಲಿದೆ. ಕಲ್ಯಾಣ ಕರ್ನಾಟಕದ ವ್ಯಾಪ್ತಿಗೆ ಸೇರುವ 7 ಜಿಲ್ಲೆಗಳಲ್ಲಿ ಅದ್ದೂರಿಯಾಗಿ ಉತ್ಸವ ನಡೆಸಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವದ ದಿನದಂದು ಯಾವ ಜಿಲ್ಲೆಗಳಲ್ಲಿ ಯಾವ ಸಚಿವರು ಧ್ವಜಾರೋಹಣ ಮಾಡಬೇಕು ಬಗ್ಗೆ ಆದೇಶವನ್ನು ಹೊರಡಿಸಿದೆ.
ಕಲ್ಯಾಣ ಕರ್ನಾಟಕದ ವ್ಯಾಪ್ತಿಗೆ ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳು ಒಳಪಡುತ್ತವೆ. ಮೊದಲು ಇದನ್ನು ಹೈದರಾಬಾದ್-ಕರ್ನಾಟಕ ಎಂದು ಕರೆಯಲಾಗುತ್ತಿತ್ತು. ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿದೆ.
ರಾಯಚೂರಿನಲ್ಲಿ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ, ಬಳ್ಳಾರಿಯಲ್ಲಿ ಬಿ. ಶ್ರೀರಾಮುಲು, ಕೊಪ್ಪಳದಲ್ಲಿ ಆನಂದ್ ಸಿಂಗ್, ಯಾದಗಿರಿಯಲ್ಲಿ ಪ್ರಭು ಚೌಹಾಣ್, ವಿಜಯನಗರಯಲ್ಲಿ ಶಶಿಕಲಾ ಜೊಲ್ಲೆ, ಬೀದರ್ನಲ್ಲಿ ಜಿಲ್ಲಾಧಿಕಾರಿ ಧ್ವಜಾರೋಹಣ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.